
ಮುಂಬೈ : ಮುಂಬೈಯಲ್ಲಿ ಬೆಳಿಗ್ಗೆ ತಮ್ಮ ಸರ್ವಿಸ್ ರಿವಾಲ್ವರ್ ನಿಂದಲೇ ಆತ್ಮಹತ್ಯೆಗೆ ಶರಣಾದ ಉಗ್ರ ನಿಗ್ರಹದ ದಳದ ಮಾಜಿ ಮುಖ್ಯಸ್ಥ ಹಿಮಾಂಶು ರಾವ್ ಹಲವು ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇದೇ ಅವರ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಪೊಲೀಸರ ವರದಿಯಲ್ಲಿ ಹೇಳಲಾಗಿದೆ.
ಹಿಮಾಂಶುರಾವ್ ಅವರ ಮನೆಯಲ್ಲಿ ಸಿಕ್ಕ ಸೂಸೈಡ್ ನೋಟ್ ನಲ್ಲಿಯೂ ಅದನ್ನೇ ಉಲ್ಲೇಖಿಸಲಾಗಿದೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿಮಾಂಶು ರಾಯ್ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಇಂದು ಮಧ್ಯಾಹ್ನ 12-40 ರ ಸುಮಾರಿನಲ್ಲಿ ಮಹಾರಾಷ್ಟ್ರದ ಮಾಜಿ ಸಹಾಯಕ ಪೊಲೀಸ್ ಮಹಾನಿರ್ದೇಶಕ ಹಿಮಾಂಶು ರಾವ್ ಅವರ ಮನೆಯಲ್ಲಿ ಖಾಸಗಿ ಪರವಾನಗಿ ಹೊಂದಿದ್ದ ಬಂದೂಕಿನಿದ ಒಂದು ಸುತ್ತಿನ ಗುಂಡು ಹೊಡೆದುಕೊಂಡು ಸಾವನ್ನಪ್ಪಿದ್ದರು.
ಹಿಮಾಂಶು ರಾಯ್ ಕಳೆದೆರಡು ವರ್ಷಗಳಿಂದಲೂ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇದಕ್ಕಾಗಿ ವೈದ್ಯಕೀಯ ರಜೆ ಪಡೆದು ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಕಾಯಿಲೆಯಿಂದಾಗಿ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಅದಕ್ಕಾಗಿ ಸಾಯುವುದೆ ಲೇಸೆಂದು ನಿರ್ಧರಿಸಿ ಸೂಸೈಡ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕ್ಯಾನ್ಸರ್ ನಿಂದಾಗಿ ಹಿಮಾಂಶು ರಾವ್ ಗಣನೀಯ ಪ್ರಮಾಣದಲ್ಲಿ ತೂಕ ಕಳೆದುಕೊಂಡಿದ್ದರು. ಮೊದಲ ರೀತಿಯಲ್ಲಿ ದೈಹಿಕ ಸದೃಢತೆ ಹೊಂದಲು ಸಾಧ್ಯವಿರಲಿಲ್ಲ. ಅವರು ಸಾವನ್ನಪ್ಪಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಬಾಂಬೆ ಆಸ್ಪತ್ರೆಯ ವೈದ್ಯ ಡಾ. ಗೌತಮ್ ಬನ್ಸಾಲಿ ಹೇಳಿದ್ದಾರೆ.
1988ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಹಿಮಾಂಶು ರಾಯ್ 2016ರಲ್ಲಿ ಮುಂಬೈಯ ಜಂಟಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಸಹಾಯಕ ಪೊಲೀಸ್ ಮಹಾನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು.
ಹಿಮಾಂಶು ರಾಯ್ ಅವರ ಸಾವಿಗೆ ಬಾಲಿವುಡ್ ನಟರಾದ ಮನೋಜ್ ಭಾಜಪೈ, ರಿತೇಶ್ ದೇಶ್ ಮುಖ್ ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
Advertisement