ಶ್ರೀದೇವಿ ಸಾವಿನ ಕುರಿತು ಸ್ವತಂತ್ರ ತನಿಖೆ; ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಅಕಾಲಿಕ ಮರಣವನ್ನಪ್ಪಿದ್ದ ನಟಿ ಶ್ರೀದೇವಿ ಸಾವಿನ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ...
ನಟಿ ಶ್ರೀದೇವಿ
ನಟಿ ಶ್ರೀದೇವಿ
ನವದೆಹಲಿ; ಅಕಾಲಿಕ ಮರಣವನ್ನಪ್ಪಿದ್ದ ನಟಿ ಶ್ರೀದೇವಿ ಸಾವಿನ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಅರ್ಜಿಯನ್ನು ಪರಿಶೀಲನೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ಪೀಠ, ನಟಿ ಶ್ರೀದೇವಿ ಸಾವಿನ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡಬಾರದು ಎಂದು ಅರ್ಜಿದಾರರಿಗೆ ತಿಳಿಸಿದ್ದಾರೆ. 
ದೆಹಲಿ ನ್ಯಾಯಾಲಯದಲ್ಲಿ ಅರ್ಜಿ ತಿರಸ್ಕೃತ ಗೊಂಡ ಬಳಿಕ ಚಿತ್ರ ನಿರ್ಮಾಪಕ ಸುನಿಲ್ ಸಿಂಗ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. 
ನಟಿ ಶ್ರೀದೇವಿಯವರು ಸುಂಬಂಧಿಕರೊಬ್ಬರ ವಿವಾಹ ಸಮಾರಂಭಕ್ಕೆಂದು ದುಬೈಗೆ ತೆರಳಿದ್ದಾಗ ಐಶಾರಾಮಿ ಹೋಟೆಲ್'ನ ಬಾತ್ ಟಪ್ ನಲ್ಲಿ ಮುಳುಗಿ ಮೃತಪಟ್ಟಿದ್ದರು. ಶ್ರೀದೇವೆ ಪ್ರಜ್ಞೆ ಕಳೆದುಕೊಂಡ ಬಳಿಕ ಬಾತ್ ಟಪ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ದುಬೈ ವಿಧಿವಿಜ್ಞಾನ ತನ್ನ ವರದಿಯಲ್ಲಿ ತಿಳಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com