
ನವದೆಹಲಿ : ಲೈಂಗಿಕ ಕಿರುಕುಳ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಸಮಿತಿಗಳನ್ನು ಸ್ಥಾಪಿಸುವಂತೆ ರಾಜ್ಯ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ನವದೆಹಲಿಯ ಟಿಸ್ ಹಜಾರಿ ನ್ಯಾಯಾಲಯದಲ್ಲಿ ಮೇ 4 ರಂದು ನಡೆದ ಮಹಿಳಾ ವಕೀಲೆಯೊಬ್ಬರ ಮೇಲಿನ ಕಿರುಕುಳ ಪ್ರಕರಣದ ನಂತರ ಸುಪ್ರೀಂಕೋರ್ಟ್ ನಿಂದ ಈ ಆದೇಶ ಹೊರಬಿದ್ದಿದೆ.
ಈ ಸಂಬಂಧದ ವರದಿಯನ್ನು ಶೀಘ್ರವೇ ಸಲ್ಲಿಸುವಂತೆ ಎಲ್ಲಾ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.
ಈ ಪ್ರಕರಣದ ಮುಂದಿನ ವಿಚಾರಣೆ ಜುಲೈ 5 ರಂದು ನಡೆಯಲಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ,ನ್ಯಾಯಾಧೀಶರಾದ ಎ.ಎಂ. ಖನ್ವೀಲ್ ಕರ್ ಮತ್ತು ಡಿ. ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠದ ಮುಂದೆ ಮಹಿಳೆ ವಕೀಲೆ ಮೇಲಿನ ಕಿರುಕುಳ ಪ್ರಕರಣದ ವಿಚಾರಣೆ ನಡೆಯಲಿದೆ.
ಕೆಲಸದ ಸ್ಥಳದಲ್ಲಿ ಮಹಿಳೆ ಮೇಲಿನ ಲೈಂಗಿಕ ತಡೆ ಕಾಯ್ದೆ 2013 ರ ಪ್ರಕಾರ ಎಲ್ಲಾ ಕಡೆಗಳಲ್ಲಿ ಲೈಂಗಿಕ ಕಿರುಕುಳ ದೂರುಗಳ ತನಿಖೆಗಾಗಿ ಸಮಿತಿ ಸ್ಥಾಪನೆ ಅಗತ್ಯವಾಗಿದೆ.
Advertisement