ನವದೆಹಲಿ: ಪ್ರಧಾನಿಯಾಗಲು ಸಿದ್ಧ ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಪ್ರಶ್ನಿಸಿದ್ದು, ದೇಶದಲ್ಲಿ ಯಾರಾದರೂ ಪ್ರಧಾನಿಯಾಗಬಹುದು ಎಂದು ಮೋದಿಗೆ ಟಾಂಗ್ ನೀಡಿದ್ದಾರೆ.
ರಾಹುಲ್ ಗಾಂಧಿ ಹೇಳಿಕೆಯನ್ನು ಯಾಕೆ ಟೀಕಿಸಲಾಗುತ್ತಿದೆ? ಕೆಲವು ವರ್ಷಗಳಿಂದ ಪ್ರಬುದ್ಧತೆ ತೋರಿಸುತ್ತಿರುವ ರಾಹುಲ್ ಗಾಂಧಿ ಜನಪ್ರಿಯತೆ ಗಳಿಸಿದ್ದಾರೆ. ಅವರು ಪ್ರಧಾನಿಯಾಗುತ್ತೇನೆ ಎನ್ನುವುದರಲ್ಲಿ ಏನು ತಪ್ಪಿದೆ ಎಂದು ಶತೃಘ್ನ ಸಿನ್ಹ ಪ್ರಶ್ನಿಸಿದ್ದಾರೆ. ನಮ್ಮ ದೇಶದಲ್ಲಿ ಯಾರು ಬೇಕಾದರೂ ಪ್ರಧಾನಿಯಾಗಬಹುದಾಗಿದೆ ಎಂದು ಶತೃಘ್ನ ಸಿನ್ಹ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, 2019 ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದ್ದು, ಪ್ರಧಾನಿಯಾಗುತ್ತೇನೆ ಎಂದು ಹೇಳಿದ್ದರು.