ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ರಚಿಸಲಿದೆ- ಯೋಗಿ ಆದಿತ್ಯನಾಥ್

ಕರ್ನಾಟಕದಲ್ಲಿನ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಪ ಬಹುಮತ ದೊರೆಯಲಿದ್ದು, ಅಧಿಕಾರಕ್ಕೆ ಬರಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Updated on

ಗೋರಖ್ ಪುರ : ಕರ್ನಾಟಕದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದು, ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಪ ಬಹುಮತ ದೊರೆಯಲಿದ್ದು, ಅಧಿಕಾರಕ್ಕೆ ಬರಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನೇಪಾಳದ ಜನಕಪುರದಿಂದ  ಆಯೋಧ್ಯೆಗೆ  ಬಸ್ಸಿನಲ್ಲಿ ಬರಲಿರುವ ಯಾತ್ರಾರ್ಥಿಗಳನ್ನು ಬರಮಾಡಿಕೊಳ್ಳುವ ಉದ್ದೇಶದಿಂದ ಗೋರಖ್ ಪುರಕ್ಕೆ ಆಗಮಿಸಿದ್ದ ಯೋಗಿ ಆದಿತ್ಯನಾಥ್ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕದಲ್ಲಿನ ಸಚಿವರು ಬಹಿರಂಗವಾಗಿ ಹಣ ಹಂಚುವ ಮೂಲಕ ಮತ  ಪಡೆಯಲು ಯತ್ನಿಸಿದ್ದಾರೆ.  ಆದರೆ, ಬಿಜೆಪಿಗೆ ಸ್ಪಷ್ಪ ಬಹುಮತ ದೊರೆಯಲಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರಸರ್ಕಾರದ ಯೋಜನೆಗಳು ಜನರಿಗೆ ಅಗತ್ಯವಾಗಿ ತಲುಪಿಲ್ಲ. ರಾಜಕೀಯ ದ್ವೇಷದಿಂದ ಅಲ್ಲಿನ ಸರ್ಕಾರ ಕೆಲಸ ಮಾಡಿದ್ದು, ಅದಕ್ಕೆ ತಕ್ಕ ಬೆಲೆಯನ್ನು ಕಾಂಗ್ರೆಸ್ ಕೊಡಲಿದೆ ಎಂದರು.

 ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ಜನರು ಬಿಜೆಪಿಯನ್ನು ಈ ಬಾರಿ ಅಧಿಕಾರಕ್ಕೆ ತರುವ ವಿಶ್ವಾಸವಿರುವುದಾಗಿ ಯೋಗಿ ಆದಿತ್ಯನಾಥ್ ಹೇಳಿದರು.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com