ಉತ್ತರ ಭಾರತದ ಐದು ರಾಜ್ಯಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ : 80 ಸಾವು , 136 ಗಾಯ

ಉತ್ತರ ಭಾರತದ ಐದು ರಾಜ್ಯಗಳಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಗುಡುಗು ಸಹಿತ ಬಿರುಗಾಳಿ ಮಳೆಯಿಂದಾಗಿ 80ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದಲ್ಲಿಯೇ ದಾಖಲೆಯ 51 ಮಂದಿ ಮೃತಪಟ್ಟಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ.

ನವದೆಹಲಿ : ಉತ್ತರ ಭಾರತದ ಐದು ರಾಜ್ಯಗಳಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಗುಡುಗು ಸಹಿತ ಬಿರುಗಾಳಿ ಮಳೆಯಿಂದಾಗಿ 80ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದಲ್ಲಿಯೇ ದಾಖಲೆಯ 51 ಮಂದಿ ಮೃತಪಟ್ಟಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ.

 ಪಶ್ಚಿಮ ಬಂಗಾಳದಲ್ಲಿ 14 , ಆಂಧ್ರಪ್ರದೇಶದಲ್ಲಿ 12, ದೆಹಲಿಯಲ್ಲಿ 2, ಮತ್ತು ಉತ್ತರ ಖಂಡ್ ನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಗುಡುಗ, ಬಿರುಗಾಳಿ ಮಳೆಯಿಂದಾಗಿ 136 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 123 ಮಂದಿ ಉತ್ತರ ಪ್ರದೇಶ, 11 ಮಂದಿ ದೆಹಲಿ ಹಾಗೂ ಇಬ್ಬರು ಉತ್ತರ್ ಖಂಡ್ ರಾಜ್ಯಕ್ಕೆ ಸೇರಿದವರಾಗಿದ್ದಾರೆ.

ಉತ್ತರ ಪ್ರದೇಶದ 24 ಜಿಲ್ಲೆಗಳು, ಪಶ್ಚಿಮ ಬಂಗಾಳದ 6, ಆಂಧ್ರಪ್ರದೇಶದ 3, ದೆಹಲಿಯ 2 ಹಾಗೂ ಆಂಧ್ರಪ್ರದೇಶದ 1 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ದೆಹಲಿ, ಉತ್ತರ ಪ್ರದೇಶದ ಕೆಲ ಭಾಗ, ಪಶ್ಚಿಮ ಬಂಗಾಳ, ಹಾಗೂ ಆಂಧ್ರಪ್ರದೇಶದಲ್ಲಿ ನಿನ್ನೆ ದೂಳು ಮಿಶ್ರಿತ ಬಿರುಗಾಳಿಯಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದಿದ್ದು, ರಸ್ತೆ, ರೈಲು ಹಾಗೂ ವಾಯು ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಹಿಮಾಚಲ ಪ್ರದೇಶ,  ಪಂಜಾಬ್, ಹರಿಯಾಣ, ಚಂಢೀಘರ್, ಮಧ್ಯಪ್ರದೇಶ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲೂ ಗುಡುಗ ಸಹಿತ ಬಿರುಗಾಳಿ ಮಳೆಯಾಗುತ್ತಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com