ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ; ಪ.ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಬಿಜೆಪಿ ಆಗ್ರಹ
ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ನಡೆದ ಹಿಂಸಾಚಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಅವರು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಸೋಮವಾರ ಆಗ್ರಹಿಸಿದ್ದಾರೆ...
ಕೋಲ್ಕತಾ; ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ನಡೆದ ಹಿಂಸಾಚಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಅವರು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಸೋಮವಾರ ಆಗ್ರಹಿಸಿದ್ದಾರೆ.
ಹಿಂಸಾಚಾರ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು. ಬೆಳಿಗ್ಗೆಯಿಂದ ಸಂಭವಿಸಿದ ಘಟನೆಗಳಿಂದ ನನಗೆ ಆಶ್ಚರ್ಯವೇನೂ ಆಗಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ನಾಚಿಕೆಗೇಡಿನ ಸರ್ಕಾರವಾಗಿದೆ. ಇಂತಹ ಸರ್ಕಾರದಿಂದ ಸಾಂವಿಧಾನಿಕ ವರ್ತನೆಗಳನ್ನು ನಿರೀಕ್ಷಿಸಬಾರದು. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಈ ಮೂಲಕ ಆಗ್ರಹಿಸುತ್ತೇನೆಂದು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ಇಂದು ಬೆಳಿಗ್ಗೆ ಆರಂಭವಾಗಿತ್ತು. ಈ ವೇಳೆ ಟಿಎಂಸಿ ಹಾಗೂ ಸಿಪಿಐ(ಎಂ) ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಘರ್ಷಣೆ ಹಿಂಸಾಚಾರಕ್ಕೆ ತಿರುಗಿ 5 ಮಂದಿ ಸಾವನ್ನಪ್ಪಿದ್ದಾರೆ, ಅಲ್ಲದೆ 26ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.