ಪಿಯೂಷ್ ಗೋಯಲ್
ದೇಶ
ಕೇಂದ್ರ ಸಚಿವ ಸಂಪುಟ ಪುನಾರಚನೆ: ಗೋಯಲ್ ಗೆ ವಿತ್ತ ಖಾತೆಯ ಹೆಚ್ಚುವರಿ ಹೊಣೆ, ಐ.ಬಿಯಿಂದ ಸ್ಮೃತಿಗೆ ಕೋಕ್
ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದು, ಕಿಡ್ನಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಅರುಣ್ ಜೇಟ್ಲಿ ಬಳಿ ಇದ್ದ ವಿತ್ತಖಾತೆಯ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದು, ಕಿಡ್ನಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಅರುಣ್ ಜೇಟ್ಲಿ ಬಳಿ ಇದ್ದ ವಿತ್ತಖಾತೆಯ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ.
ಮಾಹಿತಿ ಮತ್ತು ಪ್ರಸಾರ ಇಲಾಖೆ ಖಾತೆಯ ಜವಾಬ್ದಾರಿಯಿಂದ ಸ್ಮೃತಿ ಇರಾನಿ ಅವರನ್ನು ಮುಕ್ತಗೊಳಿಸಲಾಗಿದ್ದು, ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರಿಗೆ ಐಬಿ ಖಾತೆಯನ್ನು ನೀಡಲಾಗಿದ್ದು ಸ್ಮೃತಿ ಇರಾನಿ ಅವರನ್ನು ಜವಳಿ ಖಾತೆಯಲ್ಲಿ ಮುಂದುವರೆಸಲಾಗಿದೆ.
ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಆರೋಗ್ಯದಲ್ಲಿ ಚೇತರಿಕೆಯಾಗುವವರೆಗೆ ಪಿಯೂಷ್ ಗೋಯಲ್ ಅವರು ಹೆಚ್ಚುವರಿಯಾಗಿ ಹಣಕಾಸು ಖಾತೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಎಸ್ ಎಸ್ ಅಹ್ಲುವಾಲಿಯಾ ಅವರನ್ನು ಕುಡಿಯುವ ನೀರು ಹಾಗೂ ನೈರ್ಮಲ್ಯ ಖಾತೆಯ ರಾಜ್ಯ ಸಚಿವ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದುದ್, ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆಯನ್ನು ನೀಡಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ