ನಿರ್ಮಾಣ ಹಂತದ ಕಟ್ಟಡ ಕುಸಿತ
ದೇಶ
ವಾರಣಾಸಿ: ನಿರ್ಮಾಣ ಹಂತದ ಫ್ಲೈಓವರ್ ಕುಸಿದು 18 ಮಂದಿ ಸಾವು
ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಘಟನೆಯಲ್ಲಿ 18 ಮಂದಿ ಮೃತಪಟ್ಟಿದ್ದಾರೆ...
ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಘಟನೆಯಲ್ಲಿ 18 ಮಂದಿ ಮೃತಪಟ್ಟಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರುಅವಶೇಷಗಳಡಿ ಸಿಲುಕಿದ್ದಾರೆ.
ವಾರಣಾಸಿಯ ಕ್ಯಾಂಟ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದುಃಖ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವ ಸಿದ್ಧಾರ್ಥನಾಥ್ ಸಿಂಗ್ ಅವರು ಹೇಳಿದ್ದಾರೆ.
ನಗರದ ಮುಖ್ಯ ರೈಲ್ವೆ ನಿಲ್ದಾಣ ಮತ್ತು ಅಂತರಾಜ್ಯ ಬಸ್ ನಿಲ್ದಾಣದ ಎದುರುಗಡೆ ನಿರ್ಮಿಸುತ್ತಿದ್ದ ಫ್ಲೈಓವರ್ ಇಂದು ದಿಢೀರ್ ಕುಸಿದು ಬಿದ್ದಿದೆ.


