ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಗಡಿ ಭದ್ರತಾ ಪಡೆ (ಬಿಎಸ್ಎಫ್)ಯ ಯೋಧ ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಜಮ್ಮು; ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಗಡಿ ಭದ್ರತಾ ಪಡೆ (ಬಿಎಸ್ಎಫ್)ಯ ಯೋಧ ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಮೇ.19ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಗಡಿಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಗೊಂಡಿದೆ. 
ಕಳೆದ ರಾತ್ರಿಯಿಂದಲೂ ಪಾಕಿಸ್ತಾನ ಸೇನೆ ಮಂಗುಚಕ್ ಪ್ರದೇಶದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 
ಅಂತರಾಷ್ಟ್ರೀಯ ಗಡಿ ರೇಖೆ ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ. ಪ್ರಸ್ತುತ ಉಭಯ ಸೇನೆಗಳ ಮಧ್ಯೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಗುಂಡಿನ ಚಕಮಕಿ ವೇಳೆ ಪೇದೆ ದೇವೇಂದ್ರ ಸಿಂಗ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಷ್ಟರಲ್ಲಾಗಲೇ ಹುತಾತ್ಮರಾಗಿದ್ದರು ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com