ರಂಜಾನ್ ಅವಧಿಯಲ್ಲಿ ಸೇನಾ ಕಾರ್ಯಾಚರಣೆ ಇಲ್ಲ: ಜಮ್ಮು-ಕಾಶ್ಮೀರ ಸಿಎಂಗೆ ರಾಜನಾಥ್ ಸಿಂಗ್ ಭರವಸೆ
ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಭೇಟಿ ಮಾಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಂಜಾನ್ ತಿಂಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುವುದಿಲ್ಲ
ರಂಜಾನ್ ಅವಧಿಯಲ್ಲಿ ಸೇನಾ ಕಾರ್ಯಾಚರಣೆ ನಡೆಯುವುದಿಲ್ಲ: ಜಮ್ಮು-ಕಾಶ್ಮೀರ ಸಿಎಂಗೆ ರಾಜನಾಥ್ ಸಿಂಗ್ ಭರವಸೆ
ಶ್ರೀನಗರ: ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಭೇಟಿ ಮಾಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಂಜಾನ್ ತಿಂಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ರಂಜಾನ್ ತಿಂಗಳಲ್ಲಿ ಸೇನೆಯಿಂದ ಕದನ ವಿರಾಮವಿರಲಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಇದು ಒಳ್ಳೆಯ ಸುದ್ದಿ, ಈ ಕ್ರಮವನ್ನು ಎಲ್ಲರೂ ಸ್ವಾಗತಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ರಂಜಾನ್ ತಿಂಗಳಲ್ಲಿ ಭಾರತೀಯ ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದಲ್ಲಿ ಯಾವುದೇ ರೀತಿಯ ಕಾರ್ಯಾಚರಣೆಗಳನ್ನು ನಡೆಸುವುದಿಲ್ಲ ಎಂದು ಗೃಹ ಇಲಾಖೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಯಾರಾದರೂ ದಾಳಿ ನಡೆಸಿದರೆ ಮರು ದಾಳಿ ನಡೆಸಲು ಸೇನೆಗೆ ಅವಕಾಶವಿದೆ.