ದೇಶ

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ !

ಕರ್ನಾಟಕ ಚುನಾವಣೆ ಮುಗಿಯುತ್ತಿದ್ದಂತೆ ದೇಶಾದ್ಯಂತ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗಿದೆ.

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ !
ಸಾಂದರ್ಭಿಕ ಚಿತ್ರ
Published On :

ನವದೆಹಲಿ : ಕರ್ನಾಟಕ ಚುನಾವಣೆ ಮುಗಿಯುತ್ತಿದ್ದಂತೆ ದೇಶಾದ್ಯಂತ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಗಣನೀಯ  ಪ್ರಮಾಣದಲ್ಲಿ  ಏರಿಕೆ ಆಗಿದೆ.

ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಯಾಗಿರುವಂತೆ  ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 75 ರೂ. ಆಗಿದೆ. ಕೊಲ್ಕತ್ತಾದಲ್ಲಿ 77.79, ಮುಂಬೈಯಲ್ಲಿ 82. 94, ಮತ್ತು ಚೆನ್ನೈನಲ್ಲಿ 77. 93 ಪೈಸೆ ಆಗಿದ್ದು, ದೇಶಾದ್ಯಂತ ಗ್ರಾಹಕರ ಜೀಬಿಗೆ ಕತ್ತರಿ ಹಾಕಲಾಗಿದೆ.

ಈ ಮಧ್ಯೆ ನವದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ 66. 57 ಪೈಸೆ, ಕೋಲ್ಕತ್ತಾದಲ್ಲಿ 69. 11, ಮುಂಬೈಯಲ್ಲಿ 70.88 ಮತ್ತು ಚೆನ್ನೈನಲ್ಲಿ 70.25 ಆಗಿದೆ.  19 ದಿನಗಳ ಹಿಂದೆಯಷ್ಟೇ ತೈಲ ಬೆಲೆಯಲ್ಲಿ ಹೆಚ್ಚಳವಾಗಿತ್ತು.

ಪೆಟ್ರೋಲಿಯಂ ಉತ್ಪನ್ನಗಳನ್ನು ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಜಿಎಸ್ ಟಿ ಅಡಿ ಪರಿಗಣಿಸಬಹುದು ಎಂದು  ಕೇಂದ್ರ ಪೆಟ್ರೋಲಿಯಿಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಕಳೆದ ತಿಂಗಳು ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.