ಆಂಧ್ರ ಪ್ರದೇಶದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರ ಸಂಪುಟ ಅಸ್ತು

ಆಂಧ್ರ ಪ್ರದೇಶ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ....
ರವಿಶಂಕರ್ ಪ್ರಸಾದ್
ರವಿಶಂಕರ್ ಪ್ರಸಾದ್
ನವದೆಹಲಿ: ಆಂಧ್ರ ಪ್ರದೇಶ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಆಂಧ್ರ ಪ್ರದೇಶದ ಅನಂತಪುರ್ ಜಿಲ್ಲೆಯ ಜಂತಲೂರ್ ಗ್ರಾಮದಲ್ಲಿ ಕೇಂದ್ರೀಯ ವಿವಿ ಸ್ಥಾಪನೆಗೆ ಅನುಮತಿ ನೀಡಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಕೇಂದ್ರೀಯ ವಿವಿ ಸ್ಥಾಪನೆಗೆ ಮೊದಲ ಹಂತದಲ್ಲಿ 450 ಕೋಟಿ ರುಪಾಯಿ ಬಿಡುಗಡೆ ಮಾಡಲು ಸಂಪುಟ ಅನುಮೋದನೆ ನೀಡಿದೆ ಎಂದರು.
ಭೋಪಾಲ್ ದಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಪುನರ್ವಸತಿ ಸಂಸ್ಥೆ(ಎನ್ ಐಎಂಎಚ್ಆರ್) ಸ್ಥಾಪನೆಗೂ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com