ಡ್ರೈವಿಂಗ್‌ ವೇಳೆ ಮೊಬೈಲ್‌ ಬಳಕೆ ಅಪರಾಧವಲ್ಲ: ಕೇರಳ ಹೈಕೋರ್ಟ್‌

ವಾಹನ ಚಾಲನೆ ಮಾಡುವ ವೇಳೆ ಮೊಬೈಲ್ ಬಳಸುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ಗುರುವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕೊಚ್ಚಿ: ವಾಹನ ಚಾಲನೆ ಮಾಡುವ ವೇಳೆ ಮೊಬೈಲ್ ಬಳಸುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ಗುರುವಾರ ಹೇಳಿದೆ.
ಕಾರು ಚಾಲನೆ ಮಾಡುತ್ತಿದ್ದ ವೇಳೆ ಮೊಬೈಲ್ ಬಳಸಿದ್ದ ತಮ್ಮ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದನ್ನು ಪ್ರಶ್ನಿಸಿ ಎಂ ಜೆ ಸಂತೋಷ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ವಾಹನ ಚಲಾಯಿಸುವ ವೇಳೆ ಮೊಬೈಲ್‌ ಬಳಸುವುದರಿಂದ ಸಾರ್ವಜನಿಕರಿಗೆ ಹಾನಿ ಉಂಟಾಗದೇ ಹೋದಲ್ಲಿ, ಆರೋಪಿಯನ್ನು ದಂಡಿಸುವ ಅವಕಾಶ ಪೊಲೀಸ್‌ ಕಾಯ್ದೆ 118(ಇ)ಗೆ ಇಲ್ಲ ಎಂದು ಹೇಳಿದೆ.
ವಾಹನ ಚಾಲನೆ ವೇಳೆ ಮೊಬೈಲ್‌ ಬಳಸಿದಲ್ಲಿ, ಪೊಲೀಸ್‌ ಕಾಯ್ದೆ 118(ಇ) ಸಾರ್ವಜನಿಕರಿಗೆ ಅಪಾಯ ಒಡ್ಡಿರುವ ಆರೋಪದಲ್ಲಿ ಜೈಲು ಶಿಕ್ಷೆ, ದಂಡ ಅಥವಾ ಇವರೆಡನ್ನೂ ವಿಧಿಸಲು ಅವಕಾಶಗಳಿದೆ. ಆದರೆ ಆರೋಪಿಯಿಂದ ಸಾರ್ವಜನಿಕರ ಸುರಕ್ಷತೆಗೆ ತೊಂದರೆಯಾಗಿದ್ದಲ್ಲಿ ಮಾತ್ರ ಇದು ಅನ್ವಯವಾಗುತ್ತದೆ ಎಂದು ನ್ಯಾಯಮೂರ್ತಿ ಎಎಂ ಶಫಿಕ್ ಮತ್ತು ನ್ಯಾಯಮೂರ್ತಿ ಪಿ ಸೋಮರಾಜನ್ ಅವರು ಸ್ಪಷ್ಟಪಡಿಸಿದ್ದಾರೆ.
ಏ.26ರಂದು ಸಂತೋಷ್ ಅವರ ವಿರುದ್ಧ ಕಾರು ಚಲಾವಣೆ ವೇಳೆ ಮೊಬೈಲ್‌ ಬಳಸಿದ ಆರೋಪದ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com