ರಾಜ್ಯದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಸ್ಕೀಮ್ ಬಗ್ಗೆ ಯಾವುದೇ ಸಲಹೆ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಕರಡನ್ನು ಅಂತಿಮಗೊಳಿಸುವುದನ್ನು ಜುಲೈ ಮೊದಲ ವಾರದ ವರೆಗೆ ತಡೆಹಿಡಿಯಬೇಕು ಎಂದು ಕರ್ನಾಟಕ ಮನವಿ ಮಾಡಿತ್ತು. ಆದರೆ, ''ಕರಡು ರೂಪಿಸುವುದು ಕೇಂದ್ರ ಸರ್ಕಾರದ ಕೆಲಸ. ರಾಜ್ಯಗಳಿಗೆ ಅದರಲ್ಲಿ ಯಾವುದೇ ಪಾತ್ರವಿಲ್ಲ,'' ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ಪೀಠ ಸ್ಪಷ್ಟಪಡಿಸಿತ್ತು.