

ಜಮ್ಮು-ಕಾಶ್ಮೀರ : ಭಯೋತ್ಪಾದಕ ದಾಳಿ ನಂತರ ಇಬ್ಬರು ಪೊಲೀಸರನ್ನು ಬಂಧಿಸಿ, ವಿಚಾರಣೆ ನಡೆಸಲಾಗಿದೆ. ಭಯೋತ್ಪಾದಕರು ತಮ್ಮ ಸಿಬ್ಬಂದಿ ಮೇಲೆ ದಾಳಿ ನಡೆಸಿ, ತಮ್ಮ ಶಸಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಆರ್ ಎಸ್ ಪುರ ಸೆಕ್ಟರ್ ನ ಹೋಟೆಲ್ ಬಳಿಯ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಈ ಘಟನೆ ಸಂಭವಿಸಿದೆ. ಭಯೋತ್ಪಾದಕರ ಗುಂಪು ತಮ್ಮ ಮೇಲೆ ದಾಳಿ ನಡೆಸಿದ್ದು, ಬಂದೂಕುಗಳೆನೆಲ್ಲಾ ಕದ್ದು ಹೊಯ್ದಿದ್ದಾರೆ ಎಂದು ಕೇಂದ್ರ ಕಚೇರಿಗೆ ಪೊಲೀಸರು ತಿಳಿಸಿದ್ದಾರೆ.
ಜನದಟ್ಠಣೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸೂಕ್ತ ಸಾಕ್ಷ್ಯಧಾರ ದೊರೆತಿಲ್ಲ ಎಂಬುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಘಟನೆ ನಡೆದ ಕೂಡಲೇ ಜಮ್ಮು-ಕಾಶ್ಮೀರ ಶಸ್ತ್ರಾಸ್ತ ಪೊಲೀಸರ ಜೊತೆಯಲ್ಲಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಪೊಲೀಸರ ಸೆರೆಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಪ್ರಧಾನಮಂತ್ರಿ ನರೇಂದ್ರಮೋದಿ ನಾಳೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಮಧ್ಯೆ ಭಯೋತ್ಪಾದಕ ದಾಳಿ ನಡೆದಿರುವುದು ಭದ್ರತಾ ವ್ಯವಸ್ಥೆ ಲೋಪದ ಬಗ್ಗೆ ಶಂಕೆ ವ್ಯಕ್ತವಾಗಿದೆ.