ಚೆನ್ನೈ ಕರ್ನಾಟಕದ ರಾಜಕಾರಣ ದೇಶಾದ್ಯಂತ ಚರ್ಚೆ ನಡೆಯುತ್ತಿದ್ದು, ಬಿಜೆಪಿಯನ್ನು ಮಣಿಸಲು ಕರ್ನಾಟಕದ ಮಾದರಿಯಲ್ಲಿ ಮೈತ್ರಿ ಮಾಡಿಕೊಳ್ಳುವುದಕ್ಕೆ ಸಿಪಿಐಎಂ ಒಲವು ತೋರಿದೆ.
ಕರ್ನಾಟಕದಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಂತೆಯೇ ಲೋಕಸಭಾ ಚುನವಣೆಯಲ್ಲಿಯೂ ಕೇಂದ್ರದಲ್ಲಿ ಬಿಜೆಪಿಯನ್ನು ಮಣಿಸಲು ಪಕ್ಷಗಳು ಮೈತ್ರಿ ಮಾಡಿಕೊಳ್ಳಬೇಕೆಂದು ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.
"ಬಿಜೆಪಿಯನ್ನು ಕೇಂದ್ರದಲ್ಲಿ ಮಣಿಸುವುದಕ್ಕೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಇತರ ಪಕ್ಷಗಳಿಗೆ ಶಕ್ತಿ ತುಂಬಿವೆ" ಎಂದು ಸೀತಾರಾಮ್ ಯೆಚೂರಿ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದ ಬೆನ್ನಲ್ಲೆ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿದ್ದಕ್ಕೆ ಸೀತಾರಾಮ್ ಯೆಚೂರಿ ವಿರೋಧ ವ್ಯಕ್ತಪಡಿಸಿದ್ದರು.