ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ ಗೂಗಲ್, ಫೇಸ್ ಬುಕ್ ಗೆ ದೆಹಲಿ ಹೈಕೋರ್ಟ್ ನೋಟಿಸ್

ಜಮ್ಮು ಮತ್ತು ಕಾಶ್ಮೀರದ ಕತುವಾ ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ ಫೇಸ್ ಬುಕ್, ಟ್ವೀಟರ್, ಗೂಗಲ್....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕತುವಾ ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ ಫೇಸ್ ಬುಕ್, ಟ್ವೀಟರ್, ಗೂಗಲ್ ಹಾಗೂ ಇತರೆ ಸಾಮಾಜಿಕ ತಾಣಗಳಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ಕೋರ್ಟ್ ಟ್ವೀಟರ್, ಗೂಗಲ್ ಹಾಗೂ ಫೇಸ್ ಬುಕ್ ನ ಭಾರತೀಯ ಸಂಸ್ಥೆಗಳಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಮೇ 29ಕ್ಕೆ ಮುಂದೂಡಿದೆ.
ಇದಕ್ಕು ಕತುವಾ ಅತ್ಯಾಚಾರ ಸಂತ್ರಸ್ತೆಯ ಚಿತ್ರ ಪ್ರಕಟಿಸಿದ್ದ ಮಾಧ್ಯಮಗಳಿಗೆ ಕೋರ್ಟ್ 10 ಲಕ್ಷ ರುಪಾಯಿ ದಂಡ ವಿಧಿಸಿತ್ತು. ಅಲ್ಲದೆ ಸಂತ್ರಸ್ತೆಯ ವಿವರ ಬಹಿರಂಗಪಡಿಸಿದೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.
ಕಳೆದ ಜನವರಿಯಲ್ಲಿ ಕತುವಾದ 8 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com