ಗಡಿಯಲ್ಲಿ ಪಾಕ್ ಉದ್ಧಟತನ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ, 5 ನಾಗರಿಕರ ಸಾವು

ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿಕ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಹುತಾತ್ಮರಾಗಿ, ಇಬ್ಬರು ನಾಗರೀಕರಿಗೆ ಸಾವನ್ನಪ್ಪಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿಕ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಗಡಿ ಭದ್ರತಾ ಸಿಬ್ಬಂದಿಯೂ ಸೇರಿದಂತೆ ಒಟ್ಟು 5 ಜನರು ಸಾವನ್ನಪ್ಪಿದ್ದಾರೆ.
ಆರ್'ಎಸ್ ಪುರ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸೀತಾರಾಮ್ ಉಪಾಧ್ಯಾಯ ಎಂಬ ಬಿಎಸ್ಎಫ್ ಯೋಧ ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ. 
ಸೀತಾರಾಮ್ ಉಪಾಧ್ಯಾಯ ಅವರು ಜಾರ್ಖಾಂಡ್ ಮೂಲದವರಾಗಿದ್ದು, 1 ವರ್ಷದ ಪುತ್ರ ಹಾಗೂ 3 ವರ್ಷಗ ಪುತ್ರಿಯನ್ನು ಅಗಲಿದ್ದಾರೆ. 
ಪಾಕಿಸ್ತಾನದ ಆಪ್ರಚೋದಿತ ಗುಂಡಿನ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ನಾಗರೀಕರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 
ಗಡಿಯಲ್ಲಿ ಪದೇ ಪದೇ ತನ್ನ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಗಡಿಯಿಂದ 3 ಕಿ.ಮೀ ದೂರದಲ್ಲಿರುವ ಶಾಲೆಗಳನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com