ನವದೆಹಲಿ: ಭಾರತದಲ್ಲಿ ಭಯೋತ್ಪಾದನೆ ನಡೆಸುವ ಉದ್ದೇಶದಿಂದ ಭಾರತದೊಳಗೆ ನುಸುಳಿದ್ದ ಭಯೋತ್ಪಾದಕ ಮೊಹಮ್ಮದ್ ಅಮೀರ್ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್ ಶೀಟ್ ದಾಖಲಿಸಿದೆ.
ದೆಹಲಿ ಕೋರ್ಟ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಮೊಹಮ್ಮದ್ ಅಮಿರ್ ನನ್ನು ಉತ್ತರ ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ನ.24 ರಂದು ಬಂಧಿಸಲಾಗಿತ್ತು.
ಮೊಹಮ್ಮದ್ ಅಮಿರ್ ತನ್ನ ಸಹಚರರೊಡನೆ ಭಾರತದಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ನುಸುಳಿದ್ದ ಎಂದು ಚಾರ್ಜ್ ಶೀಟ್ ನಲ್ಲಿ ಆರೋಪಿಸಲಾಗಿದೆ.