ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ: ಅಭಿಷೇಕ್ ಸಿಂಘ್ವಿ ಸಂತಸ

ಕರ್ನಾಟಕ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆಯೇ ವಿಶ್ವಾಸ ಮತ ಯಾಚನೆ ...
ದೆಹಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ
ದೆಹಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ
Updated on

ನವದೆಹಲಿ: ಕರ್ನಾಟಕ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆಯೇ ವಿಶ್ವಾಸ ಮತ ಯಾಚನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ನೀಡಿರುವ ಆದೇಶವನ್ನು ಕಾಂಗ್ರೆಸ್ ಮುಖಂಡ ಹಾಗೂ ಹಾಗೂ ಕಾಂಗ್ರೆಸ್ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಅಭಿಷೇಕ್ ಮನು ಸಿಂಘ್ವಿ ಸ್ವಾಗತಿಸಿದ್ದಾರೆ.

ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕವಾದ ತೀರ್ಪು ನೀಡಿದೆ. ನಾಳೆ ಸಂಜೆ 4 ಗಂಟೆಗೆ ಹಂಗಾಮಿ ಸ್ಪೀಕರ್ ಸಮ್ಮುಖದಲ್ಲಿ ಸದನ ಪರೀಕ್ಷೆ ನಡೆಸಬೇಕೆಂದು ನ್ಯಾಯಾಲಯ ಆದೇಶ ನೀಡಿರುವುದು ಅತ್ಯಂತ ಸ್ವಾಗತಕಾರಿ ಎಂದು ಹೇಳಿದರು.

ನಾಳೆ ಸದನ ಪರೀಕ್ಷೆಗೆ ಮುನ್ನ ಎಲ್ಲಾ ಶಾಸಕರು ಪ್ರಮಾಣವಚನ ಸ್ವೀಕರಿಸಬೇಕು ಮತ್ತು ಬಿ.ಎಸ್.ಯಡಿಯೂರಪ್ಪನವರು ನಾಳೆಯವರೆಗೆ ಯಾವುದೇ ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಿರುವುದು ಮತ್ತು ಆಂಗ್ಲೋ-ಇಂಡಿಯನ್ ಸಮುದಾಯದವರನ್ನು ನೇಮಕ ಮಾಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿರುವುದು ಕೂಡ ಸ್ವಾಗತಾರ್ಹವಾದುದು ಎಂದು ಸಿಂಘ್ವಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com