ಗುಜರಾತ್: ಸಿಮೆಂಟ್ ಲಾರಿ ಪಲ್ಟಿ, 19 ಕೂಲಿ ಕಾರ್ಮಿಕರ ದುರ್ಮರಣ

ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಸಿಮೆಂಟ್ ಲಾರಿವೊಂದು ಪಲ್ಟಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾವನಗರ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ...
ಅಪಘಾತ
ಅಪಘಾತ
Updated on
ಬವಯಲಿ(ಗುಜರಾತ್): ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಸಿಮೆಂಟ್ ಲಾರಿವೊಂದು ಪಲ್ಟಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾವನಗರ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. 
ಟ್ರಕ್ ನಲ್ಲಿ ಸಿಮೆಂಟ್ ಚೀಲಗಳ ಜತೆಗೆ ಭಾವನಗರ ಜಿಲ್ಲೆಯ ತಲಜಾ ತಾಲೂಕಿನ ಸರ್ತಾನ್ ಪುರ ಗ್ರಾಮದ ಕೃಷಿ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದು ಈ ವೇಳೆ ಲಾರಿ ಪಲ್ಟಿಯಾಗಿ 12 ಮಹಿಳೆಯರು, ಮೂವರು ಮಕ್ಕಳು ಸೇರಿದಂತೆ 19 ಮಂದಿ ಸಾವನ್ನಪ್ಪಿದ್ದಾರೆ. 
ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದು ಅವರನ್ನು ಭಾವನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುಜರಾತ್ ಪೊಲೀಸರು ತಿಳಿಸಿದ್ದಾರೆ. 
ಅಪಘಾತ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದು ಟ್ರಕ್ ಅನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com