ದೇಶ

ಕೃತಕ ಬುದ್ಧಿಮತ್ತೆಯ ಸಮರ್ಥ ಬಳಕೆಯತ್ತ ಭಾರತೀಯ ಸೇನೆ ಹೆಜ್ಜೆ

ಭಾರತ ಸರ್ಕಾರ ರಕ್ಷಣಾ ವ್ಯವಸ್ಥೆಯನ್ನು ತಾಂತ್ರಿಕವಾಗಿ ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈಗ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳಲು ಮುಂದಾಗಿದೆ.

ಕೃತಕ ಬುದ್ಧಿಮತ್ತೆಯ ಸಮರ್ಥ ಬಳಕೆಯತ್ತ ಭಾರತೀಯ ಸೇನೆ ಹೆಜ್ಜೆ
ಕೃತಕ ಬುದ್ಧಿಮತ್ತೆಯ ಸಮರ್ಥ ಬಳಕೆಯತ್ತ ಭಾರತೀಯ ಸೇನೆ ಹೆಜ್ಜೆ
Published On :
ಬೀಜಿಂಗ್: ಭಾರತ ಸರ್ಕಾರ ರಕ್ಷಣಾ ವ್ಯವಸ್ಥೆಯನ್ನು ತಾಂತ್ರಿಕವಾಗಿ ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈಗ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳಲು ಮುಂದಾಗಿದೆ. 
ಸೇನೆಯ  ಕಾರ್ಯಾಚರಣೆ ಸಿದ್ಧತೆಗೆ ಸಹಕಾರಿಯಾಗುವ ರೀತಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಬಳಕೆ ಮಾಡಿಕೊಳ್ಳಲು ಮುಂದಾಗಿದ್ದು, ಮಾನವ ರಹಿತ ಟ್ಯಾಂಕ್ ಹಾಗೂ ವೈಮಾನಿಕ ವಾಹನಗಳು ಮತ್ತು ರೋಬಾಟ್ ಶಸ್ತ್ರಾಸ್ತ್ರಗಳಲ್ಲಿ ಈ ಅಂಶ ಸೇನೆಗೆ ಸಹಕಾರಿಯಾಗಲಿದೆ. 
ಗಡಿ ನೀತಿಯ ಭಾಗವಾಗಿ ಸೇನೆ, ನೌಕಾಪಡೆ, ವಾಯುಪಡೆಗಳನ್ನು ನೆಕ್ಸ್ಟ್ ಜನರೇಷನ್ ಯುದ್ಧಕ್ಕೆ ಹೊಂದಿಕೊಳ್ಳುವಂತೆ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.  ಇತ್ತ ನೆರೆ ರಾಷ್ಟ್ರ ಚೀನಾದಲ್ಲೂ ಸೇನೆಗೆ ಸಂಬಂಧಿಸಿದಂತೆ ಕೃತಕ ಬುದ್ಧಿಮತ್ತೆಯನ್ನು ವ್ಯಾಪಕವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ನೆಕ್ಸ್ಟ್ ಜನರೇಷನ್ ಯುದ್ಧಕ್ಕಾಗಿ ಸೇನೆಯ ಮೂರು ವಿಭಾಗಗಳಲ್ಲಿ ಕೃತಕ ಬುದ್ಧಿಮತ್ತೆಯನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದು ರಕ್ಷಣಾ ಉತ್ಪಾದನೆ ವಿಭಾಗದ ಕಾರ್ಯದರ್ಶಿ ಅಜಯ್ ಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.