ಸಿಖ್ ವಿರೋಧಿ ದಂಗೆಯ ಸಂತ್ರಸ್ತರಿಗೆ ನ್ಯಾಯ ಒದಗಿಸುತ್ತೇವೆ: ಬಿಜೆಪಿ ಭರವಸೆ
1984 ರಲ್ಲಿ ನಡೆದಿದ್ದ ಸಿಖ್ ವಿರೋಧಿ ದಂಗೆಯ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಬಿಜೆಪಿ ಕ್ರಮ ಕೈಗೊಂಡಿದ್ದು, ಪ್ರತಿ ಸಂತ್ರಸ್ತ ಕುಟುಂಬಕ್ಕೂ ನ್ಯಾಯ ಒದಗಿಸುತ್ತೇವೆ ಎಂದು ಬಿಜೆಪಿ ನಾಯಕ ರಾಮ್ ಮಾಧವ್ ತಿಳಿಸಿದ್ದಾರೆ.
ಸಿಖ್ ವಿರೋಧಿ ದಂಗೆಯ ಸಂತ್ರಸ್ತರಿಗೆ ನ್ಯಾಯ ಒದಗಿಸುತ್ತೇವೆ: ಬಿಜೆಪಿ ಭರವಸೆ
ವಾಷಿಂಗ್ ಟನ್: 1984 ರಲ್ಲಿ ನಡೆದಿದ್ದ ಸಿಖ್ ವಿರೋಧಿ ದಂಗೆಯ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಬಿಜೆಪಿ ಕ್ರಮ ಕೈಗೊಂಡಿದ್ದು, ಪ್ರತಿ ಸಂತ್ರಸ್ತ ಕುಟುಂಬಕ್ಕೂ ನ್ಯಾಯ ಒದಗಿಸುತ್ತೇವೆ ಎಂದು ಬಿಜೆಪಿ ನಾಯಕ ರಾಮ್ ಮಾಧವ್ ತಿಳಿಸಿದ್ದಾರೆ.
ವಾಷಿಂಗ್ ಟನ್ ನಲ್ಲಿ ಮಾತನಾಡಿರುವ ರಾಮ್ ಮಾಧವ್, ಸಿಖ್ ಸಮುದಾಯವನ್ನುದ್ದೇಶಿಸಿ ಮಾತನಾಡಿದ್ದು, ಎನ್ ಡಿಎ ಸರ್ಕಾರ ಸಿಖ್ ವಿರೋಧಿ ದಂಗೆಯ ಅಪರಾಧಿಗಳನ್ನು ಶಿಕ್ಷಿಸಲು ಯಾವುದೇ ಹಂತದ ವರೆಗೆ ಕಠಿಣ ನಿರ್ಧಾರ ಕೈಗೊಳ್ಳುವುದಕ್ಕೆ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ 186 ಪ್ರಕರಣಗಳತ್ತ ನ್ಯಾ.ಧೀಂಗ್ರಾ ಆಯೋಗ ಸಕ್ರಿಯವಾಗಿ ಗಮನ ಹರಿಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದಷ್ಟು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ದಂಗೆಯಲ್ಲಿ ಶಾಮೀಲಾಗಿದ್ದ ನಾಯಕರ ವಿರುದ್ಧ ಬಂಧನ ವಾರೆಂಟ್ ನ್ನೂ ಹೊರಡಿಸಲಾಗಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ.