ಮಧ್ಯಪ್ರದೇಶ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ; 9 ಸಾವು, 20 ಜನರಿಗೆ ಗಾಯ
ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ...
ಮಧ್ಯಪ್ರದೇಶ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ; 9 ಸಾವು, 20 ಜನರಿಗೆ ಗಾಯ
ಮಧ್ಯಪ್ರದೇಶ: ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಬಂಡಾದಿಂದ ಅಹಮದಾಬಾದ್'ಗೆ ಬಸ್ ತೆರಳುತ್ತಿತ್ತು. ಗುನಾ ಜಿಲ್ಲೆಯ 15 ಕಿ.ಮೀ ದೂರದಲ್ಲಿ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡ 20 ಮಂದಿಯ ಪೈಕಿ ಐವರು ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.