ಸ್ಟೆರ್ಲೈಟ್ ಕಂಪನಿ ಕಾರ್ಯಾಚರಣೆಯನ್ನು ವಿರೋಧಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದಿದ್ದ ಹಿನ್ನೆಲೆಯಲ್ಲಿ ಪೊಲೀಸರು ಗೋಲಿಬಾರ್ ಮಾಡಿದ್ದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ಬಗ್ಗೆ ಈಗ ಕೇಂದ್ರ ಗೃಹ ಇಲಾಖೆ ವರದಿ ಕೇಳಿದೆ. ಪೊಲೀಸರ ಕ್ರಮದಿಂದಾಗಿ 9 ಜನರು ಮೃತಪಟ್ಟಿರುವುದನ್ನು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸ್ಪಾಶ್ಟಪಡಿಸಿದ್ದಾರೆ. ಪೊಲೀಸರ ಕ್ರಮಕ್ಕೂ ಆಕ್ರೋಶ ವ್ಯಕ್ತವಾಗುತ್ತಿದ್ದು, ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು, ಡಿಜಿಪಿ, ಎಸ್ ಪಿ, ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ರಾಜಕೀಯ ಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.