ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ವಿರುದ್ಧದ ಪ್ರತಿಭಟನೆಯಲ್ಲಿ ಸಾವು-ನೋವು ಸಂಭವಿಸಿರುವುದು ದುರಾದೃಷ್ಟಕರ ಎಂದು ವೇದಾಂತ ಸಮೂಹ ಸಂಸ್ಥೆಯ ಅಧ್ಯಕ್ಷ ಅರ್ನಿಲ್ ಅಗರ್ವಾಲ್...
ನವದೆಹಲಿ: ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ವಿರುದ್ಧದ ಪ್ರತಿಭಟನೆಯಲ್ಲಿ ಸಾವು-ನೋವು ಸಂಭವಿಸಿರುವುದು ದುರಾದೃಷ್ಟಕರ ಎಂದು ವೇದಾಂತ ಸಮೂಹ ಸಂಸ್ಥೆಯ ಅಧ್ಯಕ್ಷ ಅರ್ನಿಲ್ ಅಗರ್ವಾಲ್ ಹೇಳಿದ್ದಾರೆ.
ಟ್ವಿಟರ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿರುವ ಅನಿಲ್ ಅಗರ್ವಾಲ್, ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕದ ಕಾರ್ಯನಿರ್ವಹಣೆಯನ್ನು ಮುಂದುವರೆಸಲು ಸಂಸ್ಥೆ ಇಚ್ಛಿಸುತ್ತದೆ, ಕೋರ್ಟ್ ಹಾಗೂ ಸರ್ಕಾರದ ಕ್ಲಿಯರೆನ್ಸ್ ಗಾಗಿ ಕಾಯುತ್ತಿದ್ದೇವೆ ಎಂದು ಅನಿಲ್ ಅಗರ್ವಾಲ್ ಹೇಳಿದ್ದಾರೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಕೇಳಿ ಬೇಸರವಾಯಿತು. ಸಂಭವಿಸಿರುವ ಸಾವು-ನೋವುಗಳು ದುರದೃಷ್ಟಕರ, ನನ್ನ ಸಹಾನುಭೂತಿ ಮೃತ ಕುಟುಂಬದ ಜೊತೆ ಇರಲಿದೆ ಎಂದು ಅಗರ್ವಾಲ್ ತಿಳಿಸಿದ್ದಾರೆ.