ಜಿಎಸ್'ಟಿ, ನೋಟುನಿಷೇಧ ನಿರ್ಧಾರ ಪ್ರಧಾನಿ ಮೋದಿ ತೆಗೆದುಕೊಂಡ ಕ್ರಾಂತಿಕಾರಿ ಕ್ರಮಗಳು; ಉಪ ರಾಷ್ಟ್ರಪತಿ

ಭ್ರಷ್ಟಾಚಾರ ಮುಕ್ತ ರಾಷ್ಟ್ರವಾಗಿಸಲು ಸರಕು ಮತ್ತು ಸೇವಾ ತೆರಿಗೆ, ನೋಟು ನಿಷೇಧದಂತಹ ಕ್ರಾಂತಿಕಾರಿ ಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೆಗೆದುಕೊಂಡಿದ್ದಾರೆಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಗುರುವಾರ ಹೇಳಿದ್ದಾರೆ...
ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು
ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು
Updated on
ಅಗರ್ತಲಾ: ಭ್ರಷ್ಟಾಚಾರ ಮುಕ್ತ ರಾಷ್ಟ್ರವಾಗಿಸಲು ಸರಕು ಮತ್ತು ಸೇವಾ ತೆರಿಗೆ, ನೋಟು ನಿಷೇಧದಂತಹ ಕ್ರಾಂತಿಕಾರಿ ಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೆಗೆದುಕೊಂಡಿದ್ದಾರೆಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಗುರುವಾರ ಹೇಳಿದ್ದಾರೆ. 
ತ್ರಿಪುರಾ ವಿಶ್ವವಿದ್ಯಾಲಯದಲ್ಲಿ ನಡೆದ 11ನೇ ಘಟಿಕೋತ್ಸವದ ಸಮಾರಂಭದಲ್ಲಿ ಮಾತನಾಡಿರುವ ಅವರು, ದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವಾರು ನಿಯಮ ಹಾಗೂ ಯೋಜನೆಗಳನ್ನು ಕೊಂಡಾಡಿದ್ದಾರೆ. 
ಸರಕು ಮತ್ತು ಸೇವಾ ತೆರಿಗೆ ಹಾಗೂ ನೋಟು ನಿಷೇಧದ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಂಡಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಜಿಎಸ್'ಟಿ ಆದಾಯ ರೂ.1.4 ಕೋಟಿ ದಾಟಿದೆ. ಹೊಸ ತೆರಿಗೆ ಆಡಳಿತಕ್ಕೆ ಇದು ಹೊಸ ಭರವಸೆಗಳನ್ನು ಹುಟ್ಟಿಸಲಿದೆ ಎಂದು ಹೇಳಿದ್ದಾರೆ. 
ಇದಲ್ಲದೆ, ಈಶಾನ್ಯ ರಾಜ್ಯಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಉತ್ತಮ ರಸ್ತೆ ಹಾಗೂ ಉದ್ಯಮವಲಯದ ಸಂಪರ್ಕಗಳ ಕುರಿತು ಕೇಂದ್ರ ಸರ್ಕಾರ ನಡೆಸುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಇದೇ ವೇಳೆ ವೆಂಕಯ್ಯ ನಾಯ್ಡು ಅವರು ಹೊಗಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com