ನವದೆಹಲಿ : ಕೇರಳದಲ್ಲಿ 11 ಜನರನ್ನು ಬಲಿಪಡೆದಿರುವ ನಿಪ್ಹಾ ವೈರಾಣು ಸಾಂಕ್ರಾಮಿಕ ರೋಗವಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.
ಡಾಕ್ಟರನ್ನೊಳಗೊಂಡ ಕೇಂದ್ರ ತಂಡ ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಹತ್ತಿರದಿಂದಲೇ ಗಮನಿಸುತ್ತಿದೆ. ಇದು ಸ್ಥಳೀಯವಾಗಿದ್ದು, ಸಾಂಕ್ರಮಿಕ ರೋಗವಲ್ಲ, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನರು ವದಂತಿಗಳಿಗೆ ಕಿವಿಗೂಡಬೇಡಿ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಕೇರಳದಲ್ಲಿನ ಮಾರಣಾಂತಿಕ ವೈರಾಣುವಿಂದಾಗಿ 11 ಮಂದಿ ಮೃತಪಟ್ಟಿದ್ದಾರೆ. ರಾಜ್ಯಕ್ಕೆ ಆಗಮಿಸುತ್ತಿರುವ ಪ್ರವಾಸಿಗರಿಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಸಲಹೆ ನೀಡಲಾಗುತ್ತಿದೆ. ಕೋಝಿಕೊಡು, ಮಲ್ಲಪುರಂ, ವೈನಾಡು ಮತ್ತು ಕಣ್ಣೂರು ಜಿಲ್ಲೆಗಳಿಗೆ ಪ್ರವಾಸಕ್ಕೆ ತೆರಳುವವರು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡುತ್ತಿದ್ದಾರೆ.
Advertisement