ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ; ದೇವೇಗೌಡ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದ ಠಾಕ್ರೆ

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆಕ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರನ್ನು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಆಹ್ವಾನಿಸಿದ್ದು, ಈ ಆಹ್ವಾನವನ್ನು ಠಾಕ್ರೆ ನಯವಾಗಿ ತಿರಸ್ಕರಿಸಿದ್ದರು ಎಂದು ತಿಳಿದುಬಂದಿದೆ...
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಮುಂಬೈ: ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆಕ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರನ್ನು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಆಹ್ವಾನಿಸಿದ್ದು, ಈ ಆಹ್ವಾನವನ್ನು ಠಾಕ್ರೆ ನಯವಾಗಿ ತಿರಸ್ಕರಿಸಿದ್ದರು ಎಂದು ತಿಳಿದುಬಂದಿದೆ.
ತಮ್ಮ ಪುತ್ರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿರುವಂತೆ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಉದ್ದವ್ ಠಾಕ್ರೆಯವರನ್ನು ಆಹ್ವಾನಿಸಿದ್ದರು. 
ಈ ಆಹ್ವಾನವನ್ನು ನಯವಾಗಿಯೇ ತಿರಸ್ಕರಿಸಿದ್ದ ಠಾಕ್ರೆಯವರು, ನೂತನ ಸರ್ಕಾರಕ್ಕೆ ಶುಭಾಶಯಗಳನ್ನು ಕೋರಿದ್ದರೆಂದು ವರದಿಗಳು ತಿಳಿಸಿವೆ. 
ಪಲ್ಘಾರ್ ನಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಈ ಚುನಾವಣೆ ನಮಗೆ ಅತ್ಯಂತ ಮುಖ್ಯವಾಗಿದೆ. ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ತೊಡಗಿಕೊಂಡಿರುವುದರಿಂದ ಸಮಾರಂಭಕ್ಕೆ ಆಗಮಿಸಲು ಸಾಧ್ಯವಿಲ್ಲ ಠಾಕ್ರೆಯವರು ದೇವೇಗೌಡ ಅವರಿಗೆ ತಿಳಿಸಿದ್ದಾರೆಂದು ಶಿವಸೇನೆ ಸಂಸದ ಸಂಜಯ್ ಸಾವತ್ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com