ನಾಳೆ ಸಿಬಿಎಸ್ ಇ 12 ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ

ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ ( ಸಿಬಿಎಸ್ ಇ) 12 ನೇ ತರಗತಿಯ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ : ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ ( ಸಿಬಿಎಸ್ ಇ) 12 ನೇ ತರಗತಿಯ ಪರೀಕ್ಷಾ  ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2017-18 ನೇ ಸಾಲಿನ ಅಕಾಡೆಮಿಕ್ ನ  ಸಿಬಿಎಸ್ ಇ 12 ನೇ ತರಗತಿ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಕಾರ್ಯದರ್ಶಿ ಅನಿಲ್ ಸ್ವರೂಪ್ ಟ್ವಿಟರ್ ನಲ್ಲಿ ಹೇಳಿದ್ದಾರೆ.

ಸಿಬಿಎಸ್ ಇ 10 ನೇ ತರಗತಿ ಫಲಿತಾಂಶದ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ. ಮಾರ್ಚ್ 3 ರಿಂದ ಏಪ್ರಿಲ್ 13 ರವರೆಗೆ  12 ನೇ ತರಗತಿ ಪರೀಕ್ಷೆ ದಿನಾಂಕ ನಿಗದಿಯಾಗಿತ್ತು.
ಆದರೆ,  ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವಿದ್ಯಾರ್ಥಿಗಳು  ಮರು ಪರೀಕ್ಷೆ  ಬರೆಯಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ   ಏಪ್ರಿಲ್ 25 ರವರೆಗೂ ಪರೀಕ್ಷೆ ದಿನವನ್ನು ವಿಸ್ತರಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com