ಉನ್ನಾವೋ: ಉತ್ತರ ಪ್ರದೇಶದ ಉನ್ನಾವೋದಲ್ಲಿ ಒಂಬತ್ತು ವರ್ಷದ ಬಾಲಕಿ ಮೇಲೆ 25 ವರ್ಷದ ಕಾಮುಕನ್ನೊಬ್ಬ ಅತ್ಯಾಚಾರ ಎಸಗಿದ ಘಟನೆ ಗುರುವಾರ ನಡೆದಿದೆ.
ತಾಯಿಯೊಂದಿಗೆ ನದಿಗೆ ತೆರಳುತ್ತಿದ್ದ ಬಾಲಕಿ ದಿಢೀರ್ ನಾಪತ್ತೆಯಾಗಿದ್ದಳು. ಬಳಿಕ ಬಾಲಕಿ ಸಮೀಪದ ಬಸ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆ ನಂತರ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ ಮತ್ತು ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿ ಎಸ್ ಕೆ ಸಿಂಗ್ ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ಉನ್ನಾವೋ ಅತ್ಯಾಚಾರ ಪ್ರಕರಣ ಸಂಬಂಧ ಸಿಬಿಐ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ ಈಗ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿದೆ.