ತೂತುಕುಡಿ ಹಿಂಸಾಚಾರ : ಮೇ 28 ರಂದು ಸುಪ್ರೀಂಕೋರ್ಟ್ ನಲ್ಲಿ ತುರ್ತು ವಿಚಾರಣೆ
ತಮಿಳುನಾಡಿನ ತೂತುಕುಡಿಯಲ್ಲಿ ಸ್ಟರ್ಲೈಟ್ ಕಾರ್ಯಾಚರಣೆ ವಿರೋಧಿಸಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿ ವಕೀಲರೊಬ್ಬರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ನವದೆಹಲಿ : ತಮಿಳುನಾಡಿನ ತೂತುಕುಡಿಯಲ್ಲಿ ಸ್ಟರ್ಲೈಟ್ ಕಾರ್ಯಾಚರಣೆ ವಿರೋಧಿಸಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿ ವಕೀಲರೊಬ್ಬರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಎ.ಎಂ. ಖನ್ವೀಲ್ ಕರ್ ಮತ್ತು ಇಂದು ಮಲ್ಹೋತ್ರಾ ಅವರಿದ್ದ ದ್ವಿಸದಸ್ಯ ಪೀಠ, ಮೇ 28 ರಂದು ತುರ್ತು ವಿಚಾರಣೆ ನಡೆಸುವುದಾಗಿ ಹೇಳಿದೆ.