ತೈಲ ಬೆಲೆ ಏರಿಕೆ ನಿಯಂತ್ರಣಕ್ಕೆ ತಕ್ಷಣದ ಪರಿಹಾರಕ್ಕೆ ಯತ್ನ: ಧರ್ಮೇಂದ್ರ ಪ್ರಧಾನ್

ತೈಲ ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ತುರ್ತು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಿದೆ....
ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
Updated on: 
ಭುವನೇಶ್ವರ್: ತೈಲ ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ತುರ್ತು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು  ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ಹೇಳಿದ್ದಾರೆ.
ತೈಲ ಬೆಲೆ ಏರಿಕೆ ಹೊರೆ ತಗ್ಗಿಸಲು ಒಡಿಶಾ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡಬೇಕು ಎಂದು ಸಹ ಧರ್ಮೇಂದ್ರ ಪ್ರಧಾನ್ ಅವರು ಕೇಳಿಕೊಂಡಿದ್ದಾರೆ.
ಪೆಟ್ರೋಲ್,  ಡೀಸೆಲ್ ಬೆಲೆಗಳನ್ನು ತಗ್ಗಿಸಲು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಯಲ್ಲಿ ತರಲು ತೈಲ ಸಚಿವಾಲಯವು ಬಯಸಿದೆ.  ತೈಲ ಬೆಲೆ ಏರಿಕೆ ನಿಯಂತ್ರಣಕ್ಕೆ ತಕ್ಷಣದ ಪರಿಹಾರದ ಕ್ರಮ ತೆಗೆದುಕೊಳ್ಳಲು ಸರ್ಕಾರ ಯತ್ನಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. 
ದೇಶದ ಬಡಜನತೆಯ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸರ್ಕಾರ ಕಳೆದ ಅಕ್ಟೋಬರ್ ನಲ್ಲಿ ಇಂಧನದ ಮೇಲೆ  ಪ್ರತಿ ಲೀಟರ್ ಗೆ 2 ರುಪಾಯಿ ಎಕ್ಸೈಸ್ ಸುಂಕವನ್ನು ಕಡಿತಗೊಳಿಸಿತ್ತು. ಈ ಸಮಯದಲ್ಲಿ ಕೇಂದ್ರವು ಕ್ಷಿಪ್ರ ಹಾಗೂ ದೀರ್ಘಕಾಲೀನ ಪರಿಹಾರಗಳನ್ನು ಎದುರು ನೋಡುತ್ತಿದೆ ಎಂದು ಅವರು ಹೇಳಿದ್ದಾರೆ.
"ಎರಡು ತೈಲ ಉತ್ಪಾದನಾ ದೇಶಗಳಾದ ಇರಾನ್ ಮತ್ತು ವೆನೆಜುವೆಲಾದ ನಡುವಿನ ರಾಜಕೀಯ ವೈರುದ್ಯವೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಹೆಚ್ಚಳದ ಹಿಂದಿನ ಪ್ರಮುಖ ಕಾರಣವಾಗಿದೆ" ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದ ಕಾರಣ ಕುರಿತ ಪ್ರಶ್ನೆಗೆ ಪ್ರಧಾನ್ ಈ ರೀತಿ ಉತ್ತರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com