ಸ್ಟರ್ಲೈಟ್ ಕಂಪನಿಯಿಂದ ಅಂತರ್ಜಲ ಮಲೀನವಾಗುತ್ತದೆ ಮತ್ತು ಸುತ್ತಲಿನ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಆರೋಪಿಸಿ ತೂತುಕುಡಿ ಜನ ಕಳೆದ ಹಲವು ತಿಂಗಳಿಂದ ಪ್ರತಿಭಟನೆ ನಡೆಸುತ್ತಿವೆ. ಆದರೆ ಕಳೆದ ಮಂಗಳವಾರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಅದನ್ನು ನಿಯಂತ್ರಿಸಲು ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಮತ್ತು ನೂರಾರು ಮಂದಿ ಗಾಯಗೊಂಡಿದ್ದಾರೆ.