ಉತ್ತರಾಖಂಡದ ಪೊಲೀಸ್ ಅಧಿಕಾರಿಯೊಬ್ಬರು ನೈತಿಕ ಪೊಲೀಸ್ ಗಿರಿಗೆ ಸೆಡ್ಡು ಹೊಡೆದು ಉದ್ರಿಕ್ತ ಗುಂಪಿನಿಂದ ಅಲ್ಪ ಸಂಖ್ಯಾತ ಸಮುದಾಯದ ಯುವಕನನ್ನು ರಕ್ಷಣೆ ಮಾಡುವ ಕರ್ತವ್ಯ ಪ್ರಜ್ಞೆ ಮರೆದಿದ್ದು, ಪೊಲೀಸ್ ಅಧಿಕಾರಿಯ ಕಾರ್ಯ ಇದೀಗ ಎಲ್ಲೆಡೆ ಅತೀವ ಶ್ಲಾಘನೆಗೆ ಪಾತ್ರವಾಗಿದೆ. ಉದ್ರಿಕ್ತ ಜನರು ಗುಂಪೊಂದು ಅಲ್ಪ ಸಂಖ್ಯಾತ ಸಮುದಾಯದ ಯುವಕನಿಗೆ ಥಳಿಸುತ್ತಿದ್ದ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಪೊಲೀಸ್ ಅಧಿಕಾರಿಯೊಬ್ಬರು ಅತನನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸ್ ಅಧಿಕಾರಿಯ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.