ಬಿಜೆಪಿ ವಿರುದ್ಧ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲು ಸಾಧ್ಯವಿಲ್ಲ: ಎಕೆ ಆಂಟನಿ

ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಏಕಾಂಗಿಯಾಗಿ...
ಎಕೆ ಆಂಟನಿ
ಎಕೆ ಆಂಟನಿ
Updated on
ತಿರುವನಂತಪುರಂ: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಟ ನಡೆಸಲು ಸಾಧ್ಯವಿಲ್ಲ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಎಕೆ ಆಂಟನಿ ಅವರು ಭಾನವಾರ ಹೇಳಿದ್ದಾರೆ.
ಇಂದು ಮಾಜಿ ಪ್ರಧಾನಿ ದಿ.ಜವಾಹರ್ ಲಾಲ್ ನೆಹರು ಅವರ 54ನೇ ಪುಣ್ಯತಿಥಿ ಅಂಗವಾಗಿ ಕೆಪಿಸಿಸಿ ಆಯೋಜಿಸಿದ್ದ ಸ್ಮರಣಾರ್ಥ ಸಭೆಯಲ್ಲಿ ಮಾತನಾಡಿದ ಆಂಟನಿ, ಬಿಜೆಪಿ ಸೋಲಿಸಲು ಕಾಂಗ್ರೆಸ್ ಜಾತ್ಯಾತೀತ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಅಗತ್ಯ ಇದೆ. ಕರ್ನಾಟಕದಲ್ಲಿ ಕಾಂಗ್ರೆಸ್  ಜೆಡಿಎಸ್ ಜೊತೆ ಕೈಜೋಡಿಸಿದ ರೀತಿಯಲ್ಲಿ ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂದರು.
ಕರ್ನಾಟಕದಲ್ಲಿ ಸರ್ಕಾರ ರಚಿಸುವ ಮೂಲಕ ಕಾಂಗ್ರೆಸ್ ನಾಯಕತ್ವ ಪ್ರದರ್ಶಿಸಿದೆ. ನಮ್ಮ ಪಕ್ಷ ತ್ಯಾಗ ಮಾಡುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ರಕ್ಷಣೆಗಾಗಿ ಜಾತ್ಯತೀತ ಶಕ್ತಿಗಳು ಒಂದಾಗುವ ಸಮಯ ಬಂದಿದೆ ಎಂದು ಮಾಜಿ ಕೇಂದ್ರ ಸಚಿವರು ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com