ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗ್ಪುರದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರನ್ನುದ್ದೇಶಿಸಿ ಜೂ.07 ರಂದು ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ತೃತೀಯ ವರ್ಷದ ಸಂಘ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ ನಿಕಟ ಪೂರ್ವ ರಾಷ್ಟ್ರಪತಿಗಳು ಭಾಗವಹಿಸಲಿದ್ದಾರೆ. ಮಾಜಿ ರಾಷ್ಟ್ರಪತಿಗಳು ಭಾಗವಹಿಸುವ ಸಮಾರಂಭದಲ್ಲಿ ಸುಮಾರು 800 ಆರ್ ಎಸ್ ಎಸ್ ನ ಕಾರ್ಯಕರ್ತರು ಅಂತಿಮ ವರ್ಷದ ಕ್ಯಾಂಪ್ ನ್ನು ಮುಕ್ತಾಯಗೊಳಿಸುತ್ತಿದ್ದಾರೆ.
ತೃತೀಯ ಸಂಘ ಶಿಕ್ಷಾ ವರ್ಗವನ್ನು ಪೂರ್ಣಗೊಳಿಸುವ ಕಾರ್ಯಕರ್ತರು ಪೂರ್ಣಾವಧಿಯ ಸ್ವಯಂ ಸೇವಕರಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಮಾಜಿ ರಾಷ್ಟ್ರಪತಿಗಳು ಆರ್ ಎಸ್ಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿರುವುದರ ಬಗ್ಗೆ ಶೀಘ್ರವೇ ಅಧಿಕೃತ ಪ್ರಕಟಣೆ ನೀಡಲಾಗುವುದು ಎಂದು ಆರ್ ಎಸ್ ಎಸ್ ತಿಳಿಸಿದೆ.