ದೇಶ

ಉಜ್ವಲಾ ಯೋಜನೆ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ಉಜ್ವಲಾ ಯೋಜನೆ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
ಪ್ರಧಾನಿ ನರೇಂದ್ರಮೋದಿ
Published On :
ನವದೆಹಲಿ:  ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಉಜ್ವಲಾ ಯೋಜನೆಯಡಿ  10 ಕೋಟಿ ಮನೆಗಳಿಗೆ  ಅನಿಲ ಸಂಪರ್ಕ ಕಲ್ಪಿಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ.
ಶುದ್ಧ ಅಡುಗೆ ಇಂಧನ ಪೂರೈಸುವ ಮೂಲಕ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ರಕ್ಷಣೆ ಉಜ್ವಲಾ ಯೋಜನೆಯ ಪ್ರಮುಖ ಗುರಿಯಾಗಿದೆ ಎಂದು ಅವರು  ತಿಳಿಸಿದ್ದಾರೆ.
ನಾನು ಚಿಕ್ಕವನಾಗಿದ್ದಾಗ ಅಮ್ಮ ಹೊಗೆಯಿಂದ ಅಡುಗೆ ಮಾಡುತ್ತಿದದ್ದು, ಚಿಕ್ಕ ಮಕ್ಕಳು ಹೊಗೆ ಕುಡಿದು ಉಸಿರಾಟದ ತೊಂದರೆ ಅನುಭವಿಸುತಿದದ್ದು ಎಲ್ಲಾವೂ ನೆನಪು ಮಾಡಿಕೊಳ್ಳುವುದಾಗಿ ನರೇಂದ್ರಮೋದಿ ಹೇಳಿದರು.
ಉತ್ತರ ಪ್ರದೇಶದ ಬಾಲೈನಲ್ಲಿ 2016 ಮೇ 1 ರಂದು ಉಜ್ವಲಾ ಯೋಜನೆಗೆ ಪ್ರಧಾನಿ ನರೇಂದ್ರಮೋದಿ ಚಾಲನೆ ನೀಡಿದ್ದರು.
ಈ ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ ಬಿಪಿಎಲ್ ಕುಟುಂಬಗಳಿಗೆ 1600 ಸಹಾಯಧನ ಒದಗಿಸುವ ಮೂಲಕ 5 ಕೋಟಿ ಅನಿಲ ಸಂಪರ್ಕ  ಪೂರೈಸಲಾಗಿದೆ.  ಈ ಯೋಜನೆ ಅನುಷ್ಠಾನಕ್ಕಾಗಿ 8 ಸಾವಿರ ಕೋಟಿ ರೂಪಾಯಿಯನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.