ತೂತುಕುಡಿ ಸ್ಟೆರ್ಲೈಟ್ ತಾಮ್ರ ಘಟಕ ಮುಚ್ಚಲಾಗುವುದು: ತ.ನಾಡು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ

ತೂತುಕುಡಿಯಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 13 ಜನರ ಸಾವಿಗೆ ಕಾರಣವಾಗಿದ್ದ ಸ್ಟೆರ್ಲೈಟ್ ತಾಮ್ರ ಘಟಕವನ್ನು ಮುಚ್ಚಲಾಗುವುದು ಎಂದು ತಮಿಳುನಾಡು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಹೇಳಿದ್ದಾರೆ.
ಪನ್ನೀರ್ ಸೆಲ್ವಂ
ಪನ್ನೀರ್ ಸೆಲ್ವಂ
ತೂತುಕುಡಿ: ಜನರ ಸಾವಿಗೆ ಕಾರಣವಾಗಿದ್ದ ಸ್ಟೆರ್ಲೈಟ್ ತಾಮ್ರ ಘಟಕವನ್ನು ಮುಚ್ಚಲಾಗುವುದು ಎಂದು ತಮಿಳುನಾಡು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಹೇಳಿದ್ದಾರೆ.
ಸ್ಟೆರ್ಲೈಟ್ ತಾಮ್ರ ಘಟಕವನ್ನು ಶಾಶ್ವತವಾಗಿ ಮುಚ್ಚುವುದಕ್ಕೆ ತಮಿಳುನಾಡು ಸರ್ಕಾರ ಕ್ರಮ ಕೈಗೊಳ್ಳಲಿದೆ, ಅಷ್ಟೇ ಅಲ್ಲದೇ ಪ್ರತಿಭಟನೆಯಲ್ಲಿ ಗಾಯಗೊಂಡವರಿಗೆ ಪರಿಹಾರ ಧನವನ್ನೂ ನೀಡಲಾಗುತ್ತಿದೆ ಎಂದು ಪನ್ನೀರ್ ಸೆಲ್ವಂ ಮಾಧ್ಯಮ ಪ್ರತಿನಿಧಿಗಳಿಗೆ ಸ್ಪಷ್ಟಪಡಿಸಿದ್ದಾರೆ. 
ತೂತುಕುಡಿಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ಮೇ.22 ರಂದು ನಡೆದಿದ್ದ ಪ್ರತಿಭಟನೆಯಲ್ಲಿ 13 ಜನರು ಮೃತಪಟ್ಟಿದ್ದರು. ಈಗ ತೂತುಕುಡಿ ಸಹಜ ಸ್ಥಿತಿಗೆ ಮರಳಿದ್ದು,  ಅಂತರ್ಜಾಲ ಸಂಪರ್ಕವನ್ನು ಎಂದಿನಂತೆ ಬಳಕೆ ಮಾಡಬಹುದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com