ಪ್ರತಿಭಟನಾಕಾರರನ್ನು ತಡೆಯುತ್ತಿರುವ ಪೊಲೀಸರು
ದೇಶ
13 ಸಾವಿನ ನಂತರ ಸ್ಟೆರ್ಲೈಟ್ ತಾಮ್ರ ಘಟಕ ಶಾಶ್ವತವಾಗಿ ಮುಚ್ಚಲು ತಮಿಳುನಾಡು ಸರ್ಕಾರ ಆದೇಶ
13 ಅಮಾಯಕರ ಸಾವಿನ ನಂತರ ಎಚ್ಚೆತ್ತುಕೊಂಡ ತಮಿಳುನಾಡು ಸರ್ಕಾರ, ತೂತುಕುಡಿಯಲ್ಲಿರುವ ವೇದಾಂತ ಗ್ರೂಪ್...
ಚೆನ್ನೈ: 13 ಅಮಾಯಕರ ಸಾವಿನ ನಂತರ ಎಚ್ಚೆತ್ತುಕೊಂಡ ತಮಿಳುನಾಡು ಸರ್ಕಾರ, ತೂತುಕುಡಿಯಲ್ಲಿರುವ ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಘಟಕವನ್ನು ಶಾಶ್ವತ ಮುಚ್ಚುವಂತೆ ಸೋಮವಾರ ಆದೇಶಿಸಿದೆ.
ಇಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ನೇತೃತ್ವದಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು, ಸ್ಟೆರ್ಲೈಟ್ ತಾಮ್ರ ಘಟಕವನ್ನು ಶಾಶ್ವತವಾಗಿ ಮುಚ್ಚಬೇಕು ಎಂಬ ನಾಗರಿಕರ ಒಕ್ಕೊರಲ ಅಭಿಪ್ರಾಯವನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮೇ.22 ರಂದು ತೂತುಕುಡಿಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ರೈತರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ 13 ಮಂದಿ ಮೃತಪಟ್ಟಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ