ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ, ಬಾಲಕಿಯರದ್ದೇ ಮೇಲುಗೈ

ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ)ಯ 10ನೇ ತರಗತಿಯ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, .....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ)ಯ 10ನೇ ತರಗತಿಯ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
2017-18ನೇ ಸಾಲಿನ ಸಿಬಿಎಸ್ ಇ 10ನೇ ತರಗತಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನವೇ ಪ್ರಕಟವಾಗಿದೆ. ಈ ಮೊದಲು ಫಲಿತಾಂಶವನ್ನು ಸಂಜೆ 4 ಗಂಟೆಗೆ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ತಿಳಿಸಿತ್ತು.
ಈ ವರ್ಷ 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಬಿಎಸ್ ಇ 10ನೇ ತರಗತಿಯ ಪರೀಕ್ಷೆ ಬರೆದಿದ್ದು, ಒಟ್ಟು ಶೇ.86.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಶೇ.88.67ರಷ್ಟು ಬಾಲಕಿಯರು ಹಾಗೂ 85.32ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ.
ಫಲಿತಾಂಶವನ್ನು ಸಿಬಿಎಸ್ ಇ ಮಂಡಳಿಯ ವೆಬ್‌ಸೈಟ್ www.cbse.nic.in ಜಾಲತಾಣದಲ್ಲಿ ನೋಡಬಹುದು.
ಎನ್‌ಐಸಿ (ನ್ಯಾಷನಲ್ ಇನ್‌ಫರ್ಮೇಶನ್ ಸೆಂಟರ್) ಸಹ ಫಲಿತಾಂಶವನ್ನು www.cbseresults.nic.in ಜಾಲತಾಣದಲ್ಲಿ ಪ್ರಕಟಿಸಿದೆ.
ದೂರವಾಣಿ ಸಂಖ್ಯೆ 011 - 24300699 ಕರೆ ಮಾಡುವ ಮೂಲಕ ಅಥವಾ 7738299899 ಸಂಖ್ಯೆಗೆ ಎಸ್‌ಎಂಎಸ್ ಕಳಿಸುವ ಮೂಲಕವೂ ಫಲಿತಾಂಶ ತಿಳಿದುಕೊಳ್ಳಬಹುದಾಗಿದೆ.
ದೆಹಲಿ ಮತ್ತು ಜಾರ್ಖಂಡ್‌ಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ದೇಶದಾದ್ಯಂತ ದೊಡ್ಡ ಸುದ್ದಿಯಾಗಿತ್ತು. ‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗಣಿತದ ಮರುಪರೀಕ್ಷೆ ನಡೆಸುವುದಿಲ್ಲ’ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಘೋಷಿಸಿತ್ತು.
ಸಿಬಿಎಸ್‌ಇ ಮಂಡಳಿಯು ಸಿಸಿಇ (ಕಂಟಿನ್ಯೂಯಸ್ ಕಾಂಪ್ರಹೆನ್ಸಿವ್ ಎವಾಲ್ಯುಯೇಷನ್) ವಿಧಾನವನ್ನು ಹಿಂಪಡೆದ ನಂತರ ನಡೆದ ಮೊದಲ ಸಾರ್ವತ್ರಿಕ ಪರೀಕ್ಷೆ ಇದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com