ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ಮಂಗಳವಾರ ಹಿಂಪಡೆದಿದ್ದಾರೆ.
ದಿಗ್ವಿಜಯ್ ಸಿಂಗ್ ಅವರು ಗಡ್ಕರಿ ಅವರ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ದೆಹಲಿಯಲ್ಲಿ ಪಟಿಯಾಲ ಕೋರ್ಟ್ ನಲ್ಲಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ಹಿಂಪಡೆದಿದ್ದಾರೆ.
ಕಲ್ಲಿದ್ದಲು ಹಂಚಿಕೆಯಲ್ಲಿ ನಿತಿನ್ ಗಡ್ಕರಿ ಅವರು ಲಾಭಮಾಡಿಕೊಂಡಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಅವರು ಆರೋಪಿಸಿದ್ದರು.