ಉಪಚುನಾವಣೆ ಫಲಿತಾಂಶದಲ್ಲಿ ಮೋದಿ ಸರ್ಕಾರದ ವಿರುದ್ಧ ಆಕ್ರೋಶದ ಪ್ರತಿಫಲನ: ಕೇಜ್ರಿವಾಲ್

ಉತ್ತರ ಪ್ರದೇಶ ಸೇರಿದಂತೆ ಮೂರು ಲೋಕಸಭೆ ಹಾಗೂ 10 ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮುಳುಗುವ ಮೂಲಕ ಮೋದಿ ಸರ್ಕಾರದ ವಿರುದ್ಧದ ಜನರ ಆಕ್ರೋಶ ಪ್ರತಿಫಲಿತವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟೀಕಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ಉತ್ತರ ಪ್ರದೇಶ ಸೇರಿದಂತೆ ಮೂರು ಲೋಕಸಭೆ ಹಾಗೂ 10 ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ  ಬಿಜೆಪಿ ಮುಳುಗುವ  ಮೂಲಕ ಮೋದಿ ಸರ್ಕಾರದ ವಿರುದ್ಧದ ಜನರ ಆಕ್ರೋಶ ಪ್ರತಿಫಲಿತವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟೀಕಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪರ್ಯಾಯ ಯಾರು ಎಂದು ಕೇಳುವವರೆಗೂ ಆಮ್ ಆದ್ಮಿ ಪಕ್ಷದ ಮುಖಂಡರು ಹೇಳಿದರು, ಆದರೆ ಫಲಿತಾಂಶಗಳು ನರೇಂದ್ರಮೋದಿ ಅವರನ್ನು ಪ್ರಧಾನಿ ಸ್ಥಾನದಿಂದ ತೆಗೆದುಹಾಕಬೇಕೆಂದು ಹೇಳುತ್ತವೆ ಎಂದು ಅವರು ಹೇಳಿದ್ದಾರೆ.

 ಇಂದಿನ ಫಲಿತಾಂಶದಲ್ಲಿ  ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಧಾನಮಂತ್ರಿ ನರೇಂದ್ರಮೋದಿಗೆ ಪರ್ಯಾಯ ಯಾರು ಎಂದು ಜನತೆ ಕೇಳುತ್ತಿದ್ದಾರೆ. ಅವರನ್ನು ಪ್ರಧಾನಿ ಸ್ಥಾನದಿಂದ ವಜಾಗೊಳಿಸಬೇಕೆಂಬುದು ಫಲಿತಾಂಶ ಹೇಳುತ್ತದೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಕೈರಾನಾ ಹಾಗೂ ಮಹಾರಾಷ್ಟ್ರದ ಬಾಂದ್ರಾ ಗೊಂಡಿಯಾ  ಉಪಚುನಾವಣೆಯಲ್ಲಿ  ಬಿಜೆಪಿ ಸೋಲಿಗೆ ಶರಣಾಗಿದ್ದರೆ, ಪಲ್ಗರ್ ನಲ್ಲಿ  ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com