ನವದೆಹಲಿ:ದೇಶಾದ್ಯಂತ ತೈಲ ದರ ಏರಿಕೆಯೇ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಲು ಪ್ರಮುಖ ಕಾರಣವಾಗಿದೆ ಎಂದು ಜೆಡಿಯು ಮುಖಂಡ ಕೆ. ಸಿ. ತ್ಯಾಗಿ ಹೇಳಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ತೈಲ ಬೆಲೆ ನಿರಂತರವಾಗಿ ಏರಿಕೆ ಆಗುತ್ತಿರುವುದು ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಪ್ರಮುಖ ಕಾರಣವಾಗಿದೆ ಎಂದಿದ್ದಾರೆ.