ಮುಲಾಯಂ, ಅಖಿಲೇಶ್ ವಾಸಿಸುತ್ತಿದ್ದ ಸರ್ಕಾರಿ ಬಂಗಲೆ ತೆರವು

ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಮುಲಾಯಂ ಸಿಂಗ್ ಯಾದವ್ ಹಾಗೂ ಪುತ್ರ ಅಖಿಲೇಶ್ ಯಾದವ್ ಸರ್ಕಾರ ನೀಡಿದ್ದ ಬಂಗಲೆಯಲ್ಲಿದ್ದ ಅವರ ಕಚೇರಿಯನ್ನು ತೆರವುಗೊಳಿಸಿದ್ದಾರೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಉತ್ತರ ಪ್ರದೇಶ: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಮುಲಾಯಂ ಸಿಂಗ್ ಯಾದವ್ ಹಾಗೂ ಪುತ್ರ ಅಖಿಲೇಶ್ ಯಾದವ್  ಸರ್ಕಾರ ನೀಡಿದ್ದ  ಬಂಗಲೆಯಲ್ಲಿದ್ದ  ಅವರ ಕಚೇರಿಯನ್ನು ತೆರವುಗೊಳಿಸಿದ್ದಾರೆ.

ಮುಖ್ಯಮಂತ್ರಿಗಳು ಅವರ ಅವಧಿ ಮುಗಿದ ನಂತರ ಸಾಮಾನ್ಯ ನಾಗರಿಕರಾಗಿದ್ದು, ಮಾಜಿ ಮುಖ್ಯಮಂತ್ರಿಗಳು ಸರ್ಕಾರಿ ಬಂಗಲೆಯಲ್ಲಿ ವಾಸಿಸುವಂತಿಲ್ಲ ಎಂದು ಮೇ 7 ರಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು.

ಆದಾಗ್ಯೂ, ಅಳಿಯ ನಿಧನ ಹೊಂದಿದ್ದ ಹಿನ್ನೆಲೆಯಲ್ಲಿ ಕಚೇರಿ ತೆರವುಗೊಳಿಸಲು  ಪರ್ಯಾಯ ಸಮಯ ನೀಡುವಂತೆ ಮೇ 28 ರಂದು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮುನ್ನ  ಬಂಗಲೆ ತೆರವುಗೊಳಿಸಲು ಎರಡು ವರ್ಷ ಕಾಲಾವಕಾಶ ನೀಡುವಂತೆ   ಉತ್ತರ ಪ್ರದೇಶದ ಎಸ್ಟೇಟ್ ಇಲಾಖೆಯಲ್ಲಿ ಮನವಿ ಮಾಡಿಕೊಂಡಿದ್ದರು.

ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ  ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ  ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್  ಸರ್ಕಾರಿ ಬಂಗಲೆ ತೆರವುಗೊಳಿಸುವುದಾಗಿ  ಎಸ್ಟೇಟ್ ಇಲಾಖೆಗೆ ಮಾಹಿತಿ ನೀಡಿದ್ದರು. 
ರಾಜನಾಥ್ ಸಿಂಗ್ ಸೇರಿದಂತೆ ಆರು ಮಂದಿ ಮಾಜಿ ಮುಖ್ಯಮಂತ್ರಿಗಳು  15 ದಿನಗಳೊಳಗೆ  ಸರ್ಕಾರಿ ಬಂಗಲೆ ತೆರವುಗೊಳಿಸುವಂತೆ ಎಸ್ಟೇಟ್ ಇಲಾಖೆ ಸೂಚನೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com