ಇನ್ನು ಏರ್ ಇಂಡಿಯಾ ಕಂಪನಿಯ ಶೇ.76 ರಷ್ಟು ಶೇರುಗಳನ್ನು ಮಾರಾಟ ಮಾಡುವ ಮೂಲಕ ಬಂಡವಾಳ ಹಿಂಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ, ಷೇರು ಖರೀದಿಯ ನಿಯಮಾವಳಿಗಳನ್ನು ಬಿಡುಗಡೆ ಮಾಡಿದ ನಂತರ ಯಾವುದೇ ಕಂಪನಿ ಷೇರು ಖರೀದಿಗೆ ಆಸಕ್ತಿ ತೋರುತ್ತಿಲ್ಲ. ಕೆಲವು ಕಂಪನಿಗಳು ತಾವು ಷೇರು ಖರೀದಿಗೆ ಮುಂದಾಗುವುದಿಲ್ಲ ಎಂದು ಸಾರ್ವಜನಿಕವಾಗಿಯೇ ಘೋಷಣೆ ಮಾಡಿವೆ. ಇದಕ್ಕೂ ಮೊದಲು ಟಾಟಾ ಗ್ರೂಪ್ ಏರ್ ಇಂಡಿಯಾದಲ್ಲಿ ಹೂಡಿಕೆ ಮಾಡಲು ಆಸಕ್ತ ತೋರುತ್ತಿದೆ ಎಂದು ಸುದ್ದಿಯಾಗಿತ್ತು. ಆದರೆ, ಟಾಟಾ ಸಂಸ್ಥೆ ಕೂಡ ಇದುವರೆಗೆ ಷೇರು ಖರೀದಿ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ ಎಂದು ತಿಳಿದುಬಂದಿದೆ.