ರಫೇಲ್ ವಿವಾದ: ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ವಿಮಾನ ಬೆಲೆಯ ಸಂಪೂರ್ಣ ಮಾಹಿತಿ ನೀಡುವುದು ಅನುಮಾನ?

Published On :
ನವದೆಹಲಿ: ರಫೇಲ್ ಯುದ್ಧ ವಿಮಾನ ಬೆಲೆ ಕುರಿತ ಸಂಪೂರ್ಣ ಮಾಹಿತಿಗಳನ್ನು ಮುಚ್ಚಿದ ಲಕೋಟೆಯಲ್ಲಿ 10 ದಿನಗಳೊಳಗಾಗಿ ಸಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಬುಧವಾರ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೆ ಕೇಂದ್ರ ಸರ್ಕಾರ ಮಾಹಿತಿ ನೀಡುವುದು ಅನುಮಾನ ಎನ್ನುತ್ತಿದೆ ಅಧಿಕಾರಿಗಳ ಮೂಲಗಳು
ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟಿಸಿರುವ ಪ್ರಕಾರ, ವಿವರಣೆ ನೀಡಿರುವ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಲಿದ್ದು, ಕೇಳಿರುವ ವಿವರಗಳನ್ನು ಹಂಚಿಕೊಳ್ಳದೇ ಇರುವುದಕ್ಕೆ ಇರುವ ಕಾರಣಗಳನ್ನು ಮನವರಿಕೆ ಮಾಡಿಕೊಡುವ ಸಾಧ್ಯತೆ ಇದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸಂಸತ್ ನಲ್ಲಿಯೂ ರಾಫೆಲ್ ಜೆಟ್ ನ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿದ್ದ ಕೇಂದ್ರ ಸರ್ಕಾರ, ರಾಫೆಲ್ ಜೆಟ್ ನ ಬೇಸಿಕ್ ಫ್ರೇಮ್ ನ ಮಾಹಿತಿಯನ್ನಷ್ಟೇ ಬಹಿರಂಗಪಡಿಸಿತ್ತು. ಆದರೆ ಈಗಾಗಲೇ ಒಪ್ಪಂದವಾಗಿರುವ ಪೂರ್ಣಪ್ರಮಾಣದ ಲೋಡೆಡ್ ಜೆಟ್ ನ ಮಾಹಿತಿಯನ್ನು ಎಲ್ಲಿಯೂ ಬಹಿರಂಗಪಡಿಸಿಲ್ಲ.
ರಾಫೆಲ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅರ್ಜಿದಾರರೂ ಸಹ ಕೇಂದ್ರ ಸರ್ಕಾರ ರಾಫೆಲ್ ಒಪ್ಪಂದದ ಸಂಪೂರ್ಣ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಹಂಚಿಕೊಳ್ಳುವುದಕ್ಕೆ ಹಿಂದೇಟು ಹಾಕಬಾರದು ಎಂದು ವಾದಿಸಿದ್ದಾಗಲೂ ಪ್ರತಿವಾದ ಮಂಡಿಸಿದ್ದ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ಕೇಂದ್ರ ಸರ್ಕಾರ ಲೋಡೆಡ್ ಜೆಟ್ ನ ವಿವರಗಳನ್ನು ಹಂಚಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂಬ ನಿಲುವನ್ನೇ ಸಿಜೆಐ ರಂಜನ್ ಗೊಗೋಯ್ ಅವರೆದುರು ಮಂಡಿಸಿದ್ದರು. ಈಗ ಕೇಂದ್ರ ಸರ್ಕಾರ ಅಧಿಕೃತವಾಗಿ ಈ ನಿಲುವನ್ನು ಪ್ರಕಟಿಸಿ ಪ್ರಮಾಣಪತ್ರ ಸಲ್ಲಿಕೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


