ಜಮ್ಮು-ಕಾಶ್ಮೀರದ ಬದ್ಗಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಬದ್ಗಮ್ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆ ಪೊಲೀಸರು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಶ್ರೀನಗರ: ಜಮ್ಮು-ಕಾಶ್ಮೀರದ ಬದ್ಗಮ್ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬದ್ಗಮ್ ಜಿಲ್ಲೆಯ ಅರಿಜಾಲ್ ಪ್ರದೇಶದ ಬುಗೂ ಗ್ರಾಮದಲ್ಲಿ ಉಗ್ರರು ಅವಿತುಕೊಂಡಿರುವ ನಿಖರ ಮಾಹಿತಿ ಪಡೆದ ಯೋಧರು ಪ್ರದೇಶವನ್ನು ಸುತ್ತುವರಿದು ಶೋಧ ನಡೆಸಲಾರಂಭಿಸಿದರು.

ಪೊಲೀಸರ ಆಗಮನ ತಿಳಿಯುತ್ತಿದ್ದಂತೆ ಅಡಗಿ ಕುಳಿತಿದ್ದ ಉಗ್ರರು ಗುಂಡಿನ ಮಳೆಗೈಯಲಾರಂಭಿಸಿದರು. ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆಯಿತು. ದಾಳಿಯಲ್ಲಿ ಉಗ್ರರು ಹತರಾದರು, ಗ್ರಾಮದಲ್ಲಿ ಶೋಧಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com