ದೇಶ

ಹಫೀಜ್ ಸಯೀದ್ ನೇತೃತ್ವದ ಜೆಯುಡಿ, ಎಫ್ಐಎಫ್ ವಿರುದ್ಧ ಕಾನೂನು ತನ್ನಿ: ಪಾಕ್ ಗೆ ಅಮೆರಿಕ

ಹಫೀಜ್ ಸಯೀದ್ ನೇತೃತ್ವದ ಜೆಯುಡಿ, ಎಫ್ಐಎಫ್ ವಿರುದ್ಧ ಕಾನೂನು ತನ್ನಿ: ಪಾಕ್ ಗೆ ಅಮೆರಿಕ
ಹಫೀಜ್ ಸಯೀದ್
Published On :
ವಾಷಿಂಗ್ಟನ್: ಮುಂಬೈ ದಾಳಿಯ ರೂವಾರಿ ಉಗ್ರ ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದಾವಾ(ಜೆಯುಡಿ) ಮತ್ತು ಫಲಾ-ಐ-ಇನ್ಸಾನಿಯಾತ್ ಫೌಂಡೇಶನ್ (ಎಫ್ಐಎಫ್) ವಿರುದ್ಧ ಕಾನೂನು ಜಾರಿಗೆ ತರುವಂತೆ ಅಮೆರಿಕ ಗುರುವಾರ ಪಾಕಿಸ್ತಾನಕ್ಕೆ ಸೂಚಿಸಿದೆ.
ಇತ್ತೀಚಿಗೆ ಈ ಉಗ್ರ ಸಂಘಟನೆಗಳ ಮೇಲಿನ ಮೇಲಿನ ನಿಷೇಧ ತೆರವುಗೊಳಿಸಿದ್ದ ಪಾಕ್ ಕ್ರಮವನ್ನು ಅಮೆರಿಕ ತೀವ್ರವಾಗಿ ಖಂಡಿಸಿದ್ದು, ಇದು ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುವ ಇಸ್ಲಾಮಾಬಾದ್ ಬದ್ಧತೆಗೆ ವಿರುದ್ಧವಾಗಿದೆ ಎಂದಿದೆ.
ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಣಯದ ಅಡಿಯಲ್ಲಿ ಭಯೋತ್ಪಾದನೆ ವಿರುದ್ಧ ಹೋರಾಡುವ ತನ್ನ ಬದ್ಧತೆಗಳನ್ನು ಪೂರೈಸುವಲ್ಲಿ ಪಾಕಿಸ್ತಾನ ವಿಫಲವಾಗಿದೆ ಎಂದು ಅಮೆರಿಕ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ವಿಶ್ವಸಂಸ್ಥೆ ಭದ್ರತಾ ಮಂಡಳಿ ಜೆಯುಡಿ ಹಾಗೂ ಎಫ್ಐಎಫ್ ಸಂಘಟನೆಗಳನ್ನು ನಿಷೇಧಿತ ಉಗ್ರ ಸಂಘಟನೆಗಳ ಪಟ್ಟಿಗೆ ಸೇರ್ಪಡೆಗೊಳಿಸಿತ್ತು. ಆದರೆ ಪಾಕಿಸ್ತಾನ ಇತ್ತೀಚಿಗೆ ಈ ಎರಡು ಸಂಘಟನೆಗಳ ಮೇಲಿನ ನಿಷೇಧ ತೆರವುಗೊಳಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.